ಕಲಘಟಗಿ ದಾಸ್ತಿಕೊಪ್ಪ ಬಳಿ ಭೀಕರ ಸರಣಿ ಅಪಘಾತ ಸ್ಥಳದಲ್ಲೇ ಇಬ್ಬರ ಸಾವು..!


ಕಲಘಟಗಿ: ಇಲ್ಲಿನ ದಾಸ್ತಿಕೊಪ್ಪ ಬಳಿ ಬೆಳ್ಳಂ ಬೆಳಿಗ್ಗೆ ಭೀಕರ ಸರಣಿ ಅಪಘಾತವಾಗಿದೆ. ಕ್ರೂಸರ್, ಖಾಸಗಿ ಬಸ್ ಹಾಗೂ ಲಾರಿ ನಡುವೆ ಡಿಕ್ಕಿಯಾಗಿದೆ‌. ಪರಿಣಾಮ ಕ್ರೂಸರ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ‌.

ಬೆಳಿಗ್ಗೆ ನಡೆದಿರೊ ಅಪಘಾತದ ಇದಾಗಿದ್ದು ಸೀಬರ್ಡ್ ಬಸ್ ಲಾರಿ ಹಾಗೂ ಕ್ರೂಸರ್ ನಡುವೆ ಭೀಕರ ಅಪಘಾತವಾಗಿದೆ. ಅಪಘಾತದ ಭೀಕರತೆಗೆ ಕ್ರೂಸರ್ ವಾಹನ ಎರಡು ಹೋಳಾಗಿದೆ. ಹೀಗಾಗಿ ಕ್ರೂಸರ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು ಮೃತಪಟ್ಟವರ ಗುರುತು ಇನ್ನೂ ಪತ್ತೆಯಾಗಿಲ್ಲ. ಕಲಘಟಗಿ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ.

error: Content is protected !!