ಮುಂಡಗೋಡ ಬಳಿ ಬೈಕ್- ಕಾರ್ ನಡುವೆ ಮುಖಾಮುಕಿ ಡಿಕ್ಕಿ, ಲಕ್ಕೊಳ್ಳಿಯ ಬೈಕ್ ಸವಾರ ಗಂಭೀರ..!

ಮುಂಡಗೋಡ: ಪಟ್ಟಣದ ಶಿರಸಿ ರಸ್ತೆಯ ಹೊಂಡಾ ಶೋ ರೂಂ ಬಳಿ ಭೀಕರ ಅಪಘಾತವಾಗಿದೆ‌. ಕಾರ್ ಹಾಗೂ ಬೈಕ್ ನಡುವೆ ಡಿಕ್ಕಿಯಾಗಿ ಬೈಕ್ ಸವಾರನಿಗೆ ಗಂಭೀರ ಗಾಯವಾಗಿದೆ.

ಮುಂಡಗೋಡ ತಾಲೂಕಿನ ಲಕ್ಕೊಳ್ಳಿ ಗ್ರಾಮದ ಮಹೇಶ್ ಪುಂಡಲೀಕ್ ಅರ್ಕಸಾಲಿ(53) ಗಂಭೀರ ಗಾಯಗೊಂಡಿದ್ದಾರೆ. ಸದ್ಯ ಗಾಯಾಳು ಸ್ಥಿತಿ ಚಿಂತಾಜನಕವಾಗಿದ್ದು ಮುಂಡಗೋಡ ತಾಲೂಕಾಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನಿಒಡಿ, ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಗೆ ರವಾನಿಸಲಾಗಿದೆ.

ಶಿರಸಿ ಕಡೆಯಿಂದ ಬರುತ್ತಿದ್ದ ಕಾರ್ ಹಾಗೂ ಮುಂಡಗೋಡ ಕಡೆಯಿಂದ ಹೊರಟಿದ್ದ ಬೈಕ್ ನಡುವೆ ಮುಖಾಮುಕಿ ಡಿಕ್ಕಿಯಾಗಿದೆ. ಪರಿಣಾಮ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದಾನೆ. ಇ‌ನ್ನು ಗಾಯಾಳುಗಳನ್ನು 108 ಅಂಬ್ಯಲೆನ್ಸ್ ಸಿಬ್ಬಂದಿಗಳಾದ ಧನರಾಜ್ ಹಾಗೂ ಚಾಲಕ ಕೆಂಚೇಶ್ ಸಮಯಕ್ಕೆ ಸರಿಯಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಸ್ಥಳಕ್ಕೆ ಮುಂಡಗೋಡ ಪೊಲೀಸರು ಭೇಟಿ ನೀಡಿ‌ ಮುಂದಿನ ಕ್ರಮ ಕೈಗೊಂಡಿದ್ದಾರೆ‌.

error: Content is protected !!