ಹುಲಿಹೊಂಡ ಬಳಿ ಅಪರಿಚಿತ ವ್ಯಕ್ತಿಯ ಶವ ಪತ್ತೆ, ಕೊಲೆ ಮಾಡಿ ಬೀಸಾಕಿದ್ರಾ ದುರುಳರು..?

ಮುಂಡಗೋಡ ತಾಲೂಕಿನ ಹುಲಿಹೊಂಡದ ಬಳಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ. ಸಂಪೂರ್ಣ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರೋ ಶವ ಹಲವು ಅನುಮಾನ ಮೂಡಿಸಿದೆ. ಇಂದು ಬೆಳಿಗ್ಗೆ ಪತ್ತೆಯಾಗಿರೋ ಶವ ಆತಂಕಕ್ಕೆ ಕಾರಣವಾಗಿದೆ.

ಕೊಂದು ಬೀಸಾಕಿದ್ರಾ..?
ಅಸಲು, ಮೇಲ್ನೋಟಕ್ಕೆ ಇದು ಕೊಲೆಯೊ ಅಥವಾ ಬೇರಿನ್ನೇನೋ ಕಾರಣಕ್ಕೆ ನಡೆದಿರೋ ಘಟನೆಯೋ ತನಿಖೆಯ ನಂತರವಷ್ಟೇ ತಿಳಿದು ಬರಬೇಕಿದೆ. ಸಂಪೂರ್ಣ ಕೊಳೆತ ಸ್ಥಿತಿಯಲ್ಲಿರೋ ಶವದ ಮುಖ ವಿರೂಪಗೊಂಡಿದೆ. ಸದ್ಯ ಮುಂಡಗೋಡ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು ಮುಂದಿನ ಕ್ರಮ ಕೈಗೊಂಡಿದ್ದಾರೆ.