ಬಾಚಣಕಿಯ ಮಜ್ಜಿಗೇರಿ ಕ್ರಾಸ್ ಬಳಿ ಕಾರು ಬೈಕ್ ನಡುವೆ ಅಪಘಾತ, ಬೈಕ್ ಸವಾರ ಗಂಭೀರ..!

ಮುಂಡಗೋಡ ತಾಲೂಕಿನ ಬಾಚಣಕಿ ಡ್ಯಾಂ ಬಳಿಯ ಮಜ್ಜಿಗೇರಿ ಕ್ರಾಸ್ ಹತ್ತಿರ ಅಪಘಾತವಾಗಿದೆ. ಕಾರು ಹಾಗೂ ಬೈಕ್ ನಡುವೆ ಮುಖಾ ಮುಕಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡಿದ್ದಾನೆ.

ಜೇನಮುರಿ ಗ್ರಾಮದ ಬಸವರಾಜ್ ಯಲ್ಲಪ್ಪ ಶ್ಯಾಡಂಬಿ(36) ಎಂಬುವವನಿಗೆ ಗಂಭೀರ ಗಾಯವಾಗಿದೆ. ಸದ್ಯ ಗಾಯಾಳುವನ್ನು 108 ಅಂಬ್ಯುಲೆನ್ಸ್ ಮೂಲಕ ಮುಂಡಗೋಡ ತಾಲೂಕಾಸ್ಪತ್ರೆಗೆ ರವಾನಿಸಲಾಗಿತ್ತು. ಪ್ರಥಮ ಚಿಕಿತ್ಸೆ ನಂತರ ಹುಬ್ಬಳ್ಳಿಯ ಕಿಮ್ಸ್ ಗೆ ರವಾನಿಸಲಾಗಿದೆ.

ಇನ್ನು ಗಾಯಾಳುವಿನ ಬಳಿಯಿದ್ದ 1450 ರೂ. ಹಾಗೂ ಮೊಬೈಲ್ ಸಂಬಂಧಿಕರಿಗೆ ಹಸ್ತಾಂತರಿಸಲಾಗಿದೆ. 108 ಅಂಬ್ಯಲೆನ್ಸ್ ಸಿಬ್ಬಂದಿಗಳಾದ ಧನರಾಜ್ ಹಾಗೂ ಚಾಲಕರು ಸಮಯಪ್ರಜ್ಞೆ ತೋರಿದ್ದಾರೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

error: Content is protected !!