ಕಾರವಾರ: ಉತ್ತರ ಕನ್ನಡ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ರಾಷ್ಟ್ರೀಯ ಮಾನವ ಹಕ್ಕು ಆಯೋಗ ದಿಂದ ಸಮನ್ಸ್ ಜಾರಿಯಾಗಿದೆ. ಹೊನ್ನಾವರದ ಕಾಸರಕೋಡು ಮೀನುಗಾರರು ಹಾಗೂ ಮೀನುಗಾರಿಕಾ ಮಹಿಳೆಯರ ಮೇಲೆ ದೌರ್ಜನ್ಯದ ಕುರಿತು ದಾಖಲಾದ ದೂರಿನನ್ವಯ ಸಮನ್ಸ್ ಜಾರಿಯಾಗಿದೆ.
ಕಾಸರಕೋಡ ಖಾಸಗಿ ಬಂದರು ಕಾಮಗಾರಿ ಸ್ಥಗಿತ ಗೊಳಿಸುವಂತೆ ಆಗ್ರಹಿಸಿ ದಿನಾಂಕ 24/1/22 ರಂದು ಮೀನುಗಾರರು ಪ್ರತಿಭಟನೆ ನಡೆಸಿದ್ದರು. ಪ್ರತಿಭಟನೆ ವೇಳೆ ಪ್ರತಿಭಟನಾ ನಿರತ ಮೀನುಗಾರರು ಹಾಗೂ ಮೀನುಗಾರಿಕಾ ಮಹಿಳೆಯರ ಮೇಲೆ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದರು. ಹೀಗಾಗಿ, 6/05/22 ರಂದು ರಾಷ್ಟ್ರೀಯ ಮಾನವಹಕ್ಕು ಆಯೋಗದಲ್ಲಿ ಮೀನುಗಾರರು ದೂರು ದಾಖಲಿಸಿದ್ದರು. ಈ ಕಾರಣಕ್ಕಾಗಿ ಎಸ್ಪಿ ಹಾಗೂ ಡೀಸಿಯವರಿಗೆ ಸಮನ್ಸ್ ಜಾರಿಮಾಡಲಾಗಿದೆ