ಮುಂಡಗೋಡ: ತಾಲೂಕಿನ ಪಾಳಾ ಗ್ರಾಮದ ಕಲಕೊಪ್ಪದ ಪೆಟ್ರೋಲ್ ಬಂಕ್ ಸಮೀಪ ನಾಯಿಗಳ ದಾಳಿಯಿಂದ ಜಿಂಕೆಯನ್ನ ರಕ್ಷಣೆ ಮಾಡಲಾಗಿದೆ. ಈ ಮೂಲಕ ಗ್ರಾಮಸ್ಥರು ಮಾನವೀಯತೆ ತೋರಿದ್ದಾರೆ.
ಕಾಡಿನಿಂದ ಆಹಾರ ಅರಸಿ ನಾಡಿಗೆ ಬಂದಿದ್ದ ಜಿಂಕೆಯನ್ನು, ಗ್ರಾಮದ ನಾಯಿಗಳು ಅಟ್ಟಿಸಿಕೊಂಡು ಹೋಗುತಿದ್ದವು, ಅದನ್ನು ಕಂಡ ಗ್ರಾಮಸ್ಥರು ನಾಯಿಗಳಿಂದ ಜಿಂಕೆಯನ್ನು ಬಚಾವ್ ಮಾಡಿದ್ದಾರೆ.
ನಂತರ ಅರಣ್ಯ ರಕ್ಷಕ ನಾರಾಯಣ ಒಣಿಕೇರಿ, ಯಲ್ಲಪ್ಪ ಬಳ್ಳಾರಿ ಹಾಗೂ ಸಿಬ್ಬಂದಿಗಳು ಮತ್ತು ಗ್ರಾಮದ ಕುಮಾರ್, ಜಗದೀಶ್, ಅಶೋಕ್ ಮುಂತಾದವರು ಸೇರಿ ಜಿಂಕೆಯನ್ನು ರಕ್ಷಿಸಿ ನಾಯಿಗಳ ದಾಳಿಯಿಂದ ಗಾಯಗೊಂಡ ಜಿಂಕೆಗೆ ಸೂಕ್ತ ಚಿಕಿತ್ಸೆ ನೀಡಿ ಕಾಡಿಗೆ ಬಿಟ್ಟು ಬಂದಿದ್ದಾರೆ.