ಮುಂಡಗೋಡ: ತಾಲೂಕಿನ ಕೊಪ್ಪ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿ ಗೀತಾ ಪಟಗಾರ ಅವರಿಗೆ ಶಿರಸಿ ಶೈಕ್ಷಣಿಕ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ ಲಭಿಸಿದೆ. ಹೀಗಾಗಿ, ಇಂದು ಕೊಪ್ಪದ ಹಳೆಯ ವಿದ್ಯಾರ್ಥಿಗಳಿಂದ ಹಾಗೂ SDMC ಸದಸ್ಯರುಗಳಿಂದ ಗೌರವ ಸನ್ಮಾನ ಮಾಡಲಾಯಿತು.

ಅಂದಹಾಗೆ, 26 ವರ್ಷಗಳಿಂದ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದು, ಕೆಂದಲಗೇರಿ ಶಾಲೆಯಲ್ಲಿ 9 ವರ್ಷ ಹಾಗೂ ಕೊಪ್ಪ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಳೆದ 17 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಶಿರಸಿ ಶೈಕ್ಷಣಿಕ ಜಿಲ್ಲೆ ಉತ್ತಮ ಶಿಕ್ಷಕಿ ಪ್ರಶಸ್ತಿ ಗೀತಾ ಪಟಗಾರ ಅವರಿಗೆ ಲಭಿಸಿರುವುದರಿಂದ ಹಳೆಯ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಸಂತಸ ವ್ಯಕ್ತಪಡಿಸಿದ್ದಾರೆ‌.

ಹೀಗಾಗಿ, ಗೀತಾ ಪಟಗಾರ ಅವರ ಸೇವೆಯಲ್ಲಿ ಕಲಿತ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಹಾಗೂ ಶಾಲೆಯ SDMC ಅಧ್ಯಕ್ಷರು ಹಾಗೂ ಉಪಾಧ್ಯಕ್ಷರು ಮತ್ತು ಸದಸ್ಯರು ಹಾಗೂ ಶಾಲಾ ಶಿಕ್ಷಕರಿಂದ ಶಾಲು ಹೊದಿಸಿ ಸನ್ಮಾನಿಸಲಾಗಿದೆ. ಹಾಗೂ ಶಾಲಾ ಮಕ್ಕಳಿಗೆ ಸಿಹಿ ಹಂಚಿ ಹರ್ಷ ವ್ಯಕ್ತಪಡಿಸಿದ್ದಾರೆ.

ಈ ವೇಳೆ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಗೀತಾ ಪಟಗಾರರವರು ಈ ಪ್ರಶಸ್ತಿ ನಮ್ಮ ಕೊಪ್ಪ ಗ್ರಾಮದ ಎಲ್ಲ ಶಿಕ್ಷಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಅರ್ಪಿಸುತ್ತೇನೆ ಮತ್ತು ನನಗೆ ಗೌರವ ಧನವನ್ನು ನಮ್ಮ ಶಾಲೆಯ ಅಭಿವೃದ್ಧಿಗೆ ನೀಡುತ್ತೇನೆ ಎಂದು ಹೇಳಿದ್ರು.

error: Content is protected !!