ಅತ್ತಿವೇರಿಯ ವ್ಯಕ್ತಿ ಲಕ್ಣ್ಮೇಶ್ವರದಲ್ಲಿ ನೇಣು ಬಿಗಿದು ಆತ್ಮಹತ್ಯೆ..!

ಮುಂಡಗೋಡ: ತಾಲೂಕಿನ ಅತ್ತಿವೇರಿಯ ವ್ಯಕ್ತಿಯೊಬ್ಬ ಗದಗ ಜಿಲ್ಲೆ ಲಕ್ಷ್ಮೇಶ್ವರದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರೋ ಶಂಕೆ ವ್ಯಕ್ತವಾಗಿದೆ.

ಅತ್ತಿವೇರಿ ಗ್ರಾಮದ ನಬೀಸಾಬ್ ಮತ್ತಿಗಟ್ಟಿ(32) ಎಂಬುವ ವ್ಯಕ್ತಿಯೇ ಆತ್ಮಹತ್ಯೆ ಮಾಡಿಕೊಂಡವನಾಗಿದ್ದಾನೆ. ತನ್ನ ಪತ್ನಿಯ ತವರು ಮನೆಯಲ್ಲೇ ವಾಸವಾಗಿದ್ದ ನಬೀಸಾಬ್ ಹೀಗೆ ದಿಢಿರನೇ ಆತ್ಮಹತ್ಯೆ ಮಾಡಿಕೊಳ್ಳಲು ಕಾರಣವೇನು ಅನ್ನೋ ಮಾಹಿತಿ ಲಭ್ಯವಾಗಿಲ್ಲ. ಸದ್ಯ ಲಕ್ಷ್ಮೇಶ್ವರ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು ಮುಂದಿನ ಕ್ರಮ ಕೈಗೊಂಡಿದ್ದಾರೆ.

error: Content is protected !!