ಮುಂಡಗೋಡ: ಪಟ್ಟಣದ ತಹಶೀಲ್ದಾರ್ ಕಾರ್ಯಾಲಯದಲ್ಲಿ ತಾಲೂಕಾಡಳಿತ ಹಾಗೂ ಮುಂಡಗೋಡ ತಾಲೂಕ ವಿಶ್ವಕರ್ಮ ಸಮಾಜ ಸೇವಾ ಸಮಿತಿ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವಕರ್ಮ ಜಯಂತಿ ಉತ್ಸವವನ್ನು ಸರಳವಾಗಿ ಆಚರಿಸಲಾಯಿತು.
ವಿಶ್ವಕರ್ಮ ಭಗವಾನರ ಭಾವಚಿತ್ರಕ್ಕೆ ವಿಶೇಷ ಪೂಜೆ ಸಲ್ಲಿಸಿ ಗೌರವ ಸಮರ್ಪಣೆ ಮಾಡಲಾಯಿತು. ನಂತರ ಇಲಾಖೆಯ ವತಿಯಿಂದ, ಇಂದೂರು ಗ್ರಾಮ ಪಂಚಾಯತಿ ನೂತನ ಅಧ್ಯಕ್ಷೆ, ವಿಶ್ವಕರ್ಮ ಸಮಾಜದ ಶ್ರೀಮತಿ ರೇಣುಕಾ ಬಡಿಗೇರ, ಈಶ್ವರಪ್ಪ ಬಡಿಗೇರ ಇಂದೂರು, ಮೌನೇಶ ಬಡಿಗೇರ ಉಗ್ಗಿನಕೇರಿ ಇವರನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಬಿಇಓ ವೆಂಕಟೇಶ ಪಟಗಾರ “ಏಕಾಗ್ರತೆ ಹಾಗೂ ಒಗ್ಗಟ್ಟಿನಿಂದ ಮಾತ್ರ ಸಮಾಜದ ಅಭಿವೃದ್ಧಿ ಸಾಧ್ಯ”ಎಂದು ಸಮಾಜ ಬಾಂಧವರಿಗೆ ಕಿವಿಮಾತು ಹೇಳಿದರು. ರಾಮಣ್ಣ ಬೆಳ್ಳಾನವರ ಅವರು ಮಾತನಾಡಿ ಧರ್ಮ ಮತ್ತು ಸಂಸ್ಕೃತಿ ಉಳಿವಿನಿಂದ ಮಾತ್ರ ಸಮಾಜದ ಏಳಿಗೆ ಸಾಧ್ಯ ರಾಜಕೀಯವಾಗಿ ವಿಶ್ವಕರ್ಮರು ಸಬಲರಾಗಬೇಕು ಎಂದು ಕರೆ ನೀಡಿದರು. ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅಧ್ಯಕ್ಷರಾದ ಆರ್ ವಿ ಬಡಿಗೇರ್ ರಾಜಕೀಯ ಶಿಕ್ಷಣದಲ್ಲಿ ಮುಂದಿದ್ದರೆ ಮಾತ್ರ ವಿಶ್ವಕರ್ಮರು ಸಬಲರಾಗಬಲ್ಲರು ಎಂದು ಹೇಳಿದರು. ಶಿಕ್ಷಕ ಮಲ್ಲಿಕಾರ್ಜುನ ಬಡಿಗೇರ ಕಾರ್ಯಕ್ರಮವನ್ನು ನಿರೂಪಿಸಿದರು.