ಮುಂಡಗೋಡ: ಗಾಂಧಿ ಜಯಂತಿ ಹಾಗೂ ಶಾಸ್ತ್ರಿಯವರ ಜಯಂತಿಯಂದು ಮುಂಡಗೋಡಿನಲ್ಲಿ ಪುಣ್ಯದ ಕೆಲಸ ಮಾಡುತ್ತಿರುವ ಧನ್ಯತೆ ಇದೆ ಅಂತಾ ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಮನತುಂಬಿ ಹೇಳಿದ್ರು.
ಅವ್ರು ಇಂದು ಪಟ್ಟಣದ ಟೌನ್ ಹಾಲ್ ನಲ್ಲಿ ವಸತಿ ಇಲಾಖೆಯ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ಪಟ್ಟಣದ ಗಾಂಧಿನಗರ, ಕಂಬಾರಗಟ್ಟಿ, ಲಂಬಾಣಿ ತಾಂಡಾ, ಅಂಬೇಡ್ಕರ್ ಬಡಾವಣೆಯ 250 ಅರ್ಹ ಫಲಾನುಭವಿಗಳಿಗೆ ಅಧಿಕೃತ ಹಕ್ಕು ಪತ್ರ ವಿತರಿಸಿ ಮಾತನಾಡುತ್ತಿದ್ದರು.
ಮುಂಡಗೋಡಿನ ಬಡವರಿಗೆ ಒಳ್ಳೆಯ ದಿನಗಳು ಬಂದಿವೆ. ಕಳೆದ ಮೂವತ್ತು ವರ್ಷಗಳಿಂದ ಆಗದ ಕೆಲಸ ಮೊಟ್ಟ ಮೊದಲ ಬಾರಿಗೆ ಅನುಷ್ಠಾನಕ್ಕೆ ಬರುತ್ತಿದೆ. ಇಡೀ ಕ್ಷೇತ್ರದ ಹಳ್ಳಿಗಳಲ್ಲಿ ರಸ್ತೆಗಳ ಕಾಂಕ್ರೀಟಿಕರಣ ಮಾಡುತ್ತಿದ್ದೇವೆ. ಹಳ್ಳಿಗಳ ಅಭಿವೃದ್ಧಿ ಮಾಡುತ್ತಿದ್ದೇವೆ ಅಂತಾ ಸಚಿವ ಹೆಬ್ಬಾರ್ ಹೇಳಿದ್ರು.
ಇನ್ನು ಬಡ ಕಾರ್ಮಿಕರ ಮಕ್ಕಳಿಗೆ ಐಎಎಸ್, ಕೆಎಎಸ್ ಸೇರಿದಂತೆ ಉನ್ನತ ಹುದ್ದೆಗಳನ್ನು ಪಡೆಯುವಂತಾಗಲು ಕಾರ್ಮಿಕರ ಮಕ್ಕಳಿಗೆ ಕೋಚಿಂಗ್ ವ್ಯವಸ್ಥೆ ಮಾಡಿದ್ದೇವೆ. ಕಾರ್ಮಿಕರ ಸಮಸ್ಯೆಗಳ ಬಗ್ಗೆ ಖುದ್ದು ಅರಿವು ಹೊಂದಿರೋ ನಾನು ಯಾರಿಗೂ ಬೇಡವಾಗಿದ್ದ ಕಾರ್ಮಿಕ ಇಲಾಖೆ ಪಡೆದು ಅಭಿವೃದ್ಧಿ ಕೆಲಸ ಮಾಡಿದ್ದಿನಿ ಅಂತಾ ಸಚಿವ ಹೆಬ್ಬಾರ್ ಹೆಮ್ಮೆಯಿಂದ ಹೇಳಿಕೊಂಡ್ರು.
ಕಾರ್ಯಕ್ರಮದಲ್ಲಿ ಮಾಜಿ ಜಿಪಂ ಸದಸ್ಯ ಎಲ್.ಟಿ.ಪಾಟೀಲ್, ಪಟ್ಟಣ ಪಂಚಾಯತಿ ಅಧ್ಯಕ್ಷೆ ಜಯಸುಧಾ ಭೋವಿವಡ್ಡರ್, ಪಟ್ಟಣ ಪಂಚಾಯತಿ ಸದಸ್ಯ ಫಣಿರಾಜ್ ಹದಳಗಿ, ಜಿಪಂ ಮಾಜಿ ಸದಸ್ಯ ರವಿಗೌಡ ಪಾಟೀಲ್, ಬಿಜೆಪಿ ಮಂಡಳಾಧ್ಯಕ್ಷ ನಾಗಭೂಷಣ ಹಾವಣಗಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.