ಅ.28 ಕ್ಕೆ ಗ್ರಾಪಂ ಉಪಚುನಾವಣೆ ದಿನಾಂಕ ಫಿಕ್ಸ್, ಮುಂಡಗೋಡಿನ ಪಾಳಾ ಪಂಚಾಯತಿ 1ಸ್ಥಾನಕ್ಕೆ ಚುನಾವಣೆ

ಬೆಂಗಳೂರು: ರಾಜ್ಯದಲ್ಲಿ ಖಾಲಿಯಾಗಿರುವ ಗ್ರಾಮ ಪಂಚಾಯತಿ ಸ್ಥಾನಗಳಿಗೆ ಉಪ ಚುನಾವಣೆ ನಡೆಸಲು ದಿನಾಂಕ ಘೋಷಣೆಯಾಗಿದೆ. ಅಕ್ಟೋಬರ್ 28 ರಂದು ಗ್ರಾಮ ಪಂಚಾಯತಿ ಉಪ ಚುನಾವಣೆ ನಡೆಸಲು ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸಿದೆ.

2022 ಅಗಷ್ಟ ನಿಂದ, 2022ರ ನವೆಂಬರ್ ತಿಂಗಳವರೆಗಿನ ಅವಧಿಯಲ್ಲಿ ಮುಕ್ತಾಯವಾಗಲಿರುವ ಗ್ರಾಮ ಪಂಚಾಯಿತಿಗಳಿಗೆ ಸಾರ್ವತ್ರಿಕ ಚುನಾವಣೆಯನ್ನು ಹಾಗೂ ಗ್ರಾಮ ಪಂಚಾಯಿತಿಗಳಲ್ಲಿ ವಿವಿಧ ಕಾರಣಗಳಿಂದ ಖಾಲಿ ಇರುವ / ತೆರವಾಗಿರುವ ಸ್ಥಾನಗಳಿಗೆ ಉಪ ಚುನಾವಣೆಯನ್ನು ನಡೆಸಲು ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ, 1993ರ ಪುಕರಣ 308ಎಎ ಮತ್ತು 308ಎಬಿ ರನ್ವಯ ಚುನಾವಣಾ ವೇಳಾ ಪಟ್ಟಿಯನ್ನು ಬಿಡುಗಡೆಗೊಳಿಸಿದೆ.

ಪಾಳಾ 1 ಸ್ಥಾನಕ್ಕೆ ಚುನಾವಣೆ..!
ಅದ್ರಂತೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಒಟ್ಟೂ 6 ಗ್ರಾಮ ಪಂಚಾಯತಿ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ. ಅದ್ರಲ್ಲಿ ಮುಂಡಗೋಡ ತಾಲೂಕಿನ ಪಾಳಾ ಗ್ರಾಮ ಪಂಚಾಯತಿಯಲ್ಲಿ ತೆರವಾಗಿರುವ ಒಂದು ಸ್ಥಾನಕ್ಕೆ ಉಪಚುನವಾಣೆ ನಡೆಯಲಿದೆ. ಅಂದಹಾಗೆ, ಪಾಳಾ ಗ್ರಾಮ ಪಂಚಾಯತಿ ಅಧ್ಯಕ್ಷೆಯಾಗಿದ್ದ ಶ್ರೀಮತಿ ಅಕ್ಕಮ್ಮ ಬಸವರಾಜ್ ಮೇಲಿನಮನಿ ಯವರು ಕೊಲೆಯಾದ ಕಾರಣಕ್ಕೆ ಆ ಸ್ಥಾನ ಖಾಲಿಯಾಗಿತ್ತು, ಹೀಗಾಗಿ, ಆ ಸ್ಥಾನಕ್ಕೆ ಈಗ ಉಪ ಚುನಾವಣೆ ನಡೆಯುತ್ತಿದೆ.

ಯಾವಾಗ ಪ್ರಕ್ರಿಯೆ ಶುರು..?
ಇದೇ ಅಕ್ಟೋಬರ್ 13 ರಂದೇ ಜಿಲ್ಲಾಧಿಕಾರಿಗಳು ಚುನಾವಣೆಯ ಅಧಿಸೂಚನೆ ಹೊರಡಿಸಲಿದ್ದು, ಅವತ್ತೇ ಚುನಾವಣಾ ನೀತಿ ಸಂಹಿತೆ ಜಾರಿಯಾಗಲಿದೆ. ನಾಮಪತ್ರ ಸಲ್ಲಿಸಲು ಅ.18 ಕೊನೆಯ ದಿನವಾಗಿದೆ. ಅ. 19 ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ಅ. 21 ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿದೆ. ಅ. 28 ರಂದು ಶುಕ್ರವಾರ ಬೆಳಿಗ್ಗೆ 7 ಗಂಟೆಯಿಂದ, ಸಂಜೆ 5 ಗಂಟೆಯವರೆಗೆ ಮತದಾನ ನಡೆಯಲಿದೆ.

ಇನ್ನು ಮರು ಮತದಾನ ಅವಶ್ಯವಿದ್ದರೆ, ಅ.30 ರಂದು ಮರು ಮತದಾನ ನಡೆಯಲಿದೆ. ಅ.31 ರಂದು ಆಯಾ ತಾಲೂಕು ಕೇಂದ್ರಗಳಲ್ಲಿ ಮತ ಏಣಿಕೆ ಕಾರ್ಯ ನಡೆಯಲಿದೆ‌. ಈ ಕುರಿತು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೂ ಚುನಾವಣಾ ಆಯೋಗದಿಂದ ಇಂದು ಅಧಿಸೂಚನೆ ಹೊರಡಿಸಲಾಗಿದೆ.

error: Content is protected !!