ವಿಜಯಪುರ: ವಿಷಕಾರಿ ಹಾವು ಕಚ್ಚಿ ನಾಲ್ಕು ತಿಂಗಳ ಗರ್ಭಿಣಿ ಸಾವು ಕಂಡ ದಾರುಣ ಘಟನೆ, ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಕುಂಟೋಜಿಯಲ್ಲಿ ನಡೆದಿದೆ.
ನಾಲ್ಕು ತಿಂಗಳ ಗರ್ಭಿಣಿ ನಿರ್ಮಲಾ ಯಲ್ಲಪ್ಪ ಚಲವಾದಿ(25) ಹಾವು ಕಚ್ಚಿ ಸಾವು ಕಂಡಿದ್ದಾಳೆ. ಹಾವು ಕಚ್ಚಿದ ವೇಳೆಯಲ್ಲಿ ಹೆಚ್ಚಿನ ಚಿಕಿತ್ಸೆಗೆಂದು ವಿಜಯಪುರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ, ಚಿಕಿತ್ಸೆ ಫಲಕಾರಿಯಾಗದೇ ಸಾವು ಕಂಡಿದ್ದಾಳೆ. ಮುದ್ದೇಬಿಹಾಳ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.