ಮುಂಡಗೋಡ: ತಾಲೂಕಿನ ಇಂದಿರಾನಗರದ ಬಳಿ ಬೈಕ್ ನಿಯಂತ್ರಣ ತಪ್ಪಿ ಅಪಘಾತವಾಗಿದೆ. ಪರಿಣಾಮ ಬೈಕ್ ನಲ್ಲಿದ್ದ ಓರ್ವನಿಗೆ ಗಂಭೀರ ಗಾಯವಾಗಿದ್ದು ಆಸ್ಪತ್ರೆಗೆ ರವಾನಿಸಲಾಗಿದೆ.
ಮುಂಡಗೋಡಿನಿಂದ ಕಲಘಟಗಿ ಕಡೆಗೆ ಹೋಗುತ್ತಿರುವಾಗ, ಇಂದಿರಾ ನಗರ ಹತ್ತಿರ ಬೈಕ್ ನಿಯಂತ್ರಣ ತಪ್ಪಿ ಅಪಘಾತವಾಗಿದೆ. ಬೈಕ್ ನಲ್ಲಿದ್ದ ಕುಂದಗೋಳ ತಾಲೂಕಿನ ಸುರೇಶ ಶಿವಪ್ಪ ಗುಡಿಯಾಳ್(33) ಎಂಬುವವರಿಗೆ ತಲೆಗೆ ಹಾಗೂ ಮುಖಕ್ಕೆ ಗಾಯವಾಗಿದೆ.
ಅದೃಷ್ಟವಶಾತ್ ಮತ್ತೊರ್ವನಿಗೆ ಯಾವುದೇ ಗಾಯವಾಗದೆ ಸುರಕ್ಷಿತವಾಗಿದ್ದಾನೆ. ಇನ್ನು ಅಪಘಾತ ನಡೆದ ತಕ್ಷಣವೇ ಮುಂಡಗೋಡ ತಾಲೂಕಾಸ್ಪತ್ರೆಗೆ ಗಾಯಾಳುವನ್ನು ರವಾನಿಸಲಾಗಿತ್ತು. ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಗೆ ರವಾನಿಸಲಾಗಿದೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.