ಕಾತೂರು ನಂದಿಪುರದ ಬಳಿ ಭೀಕರ ಅಪಘಾತ, ಎರಡು ಬೈಕಿಗೆ ಕಾರು ಡಿಕ್ಕಿ ಮೂವರಿಗೆ ಗಂಭೀರ ಗಾಯ..!

ಮುಂಡಗೋಡ: ತಾಲೂಕಿನ ನಂದೀಪುರ ಬಳಿ ಭೀಕರ ಅಪಘಾತವಾಗಿದೆ. ರಾಂಗ್ ಸೈಡ್ ಬಂದ ಕಾರೊಂದು ಎರಡು ಬೈಕ್ ಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ಮಹಿಳೆಯೂ ಸೇರಿ ಮೂವರಿಗೆ ಗಂಭೀರ ಗಾಯವಾಗಿದೆ.

ಮುಂಡಗೋಡ ಕಡೆಯಿಂದ ಶಿರಸಿ ಕಡೆಗೆ ಹೋಗುತ್ತಿದ್ದ ಕಾರು, ಶಿರಸಿ ಕಡೆಯಿಂದ ಮುಂಡಗೋಡ ಕಡೆಗೆ ಬರುತ್ತಿದ್ದ ಎರಡು ಬೈಕ್ ಗಳಿಗೆ ಡಿಕ್ಕಿಯಾಗಿದೆ. ಪರಿಣಾಮ ಬೈಕಿನಲ್ಲಿದ್ದ ಹಾವೇರಿ ಮೂಲದ ಓರ್ವ ಮಹಿಳೆ ಹಾಗೂ ಪುರುಷನಿಗೆ ಗಂಭೀರ ಗಾಯವಾಗಿದೆ. ಹಾಗೆಯೇ ಮತ್ತೊಂದು ಬೈಕಿನಲ್ಲಿದ್ದ ವ್ಯಕ್ತಿಗೂ ಗಾಯವಾಗಿದೆ.

ಎಣ್ಣೆ ಏಟಲ್ಲಿ..?
ಅಂದಹಾಗೆ, ಅಕ್ಷರಶಃ ರಾಂಗ್ ರೂಟ್ ನಲ್ಲಿದ್ದ KA 33 M 4620 ನೋಂದಣಿ ಸಂಖ್ಯೆಯ ಕಾರು, ಬೈಕುಗಳಿಗೆ ಡಿಕ್ಕಿಹೊಡೆದಿದೆ, ಕಾರಿನಲ್ಲಿದ್ದವರು ಅಪಘಾತವಾದ ತಕ್ಷಣವೇ ಕಾರು ಬಿಟ್ಟು ಪರಾರಿಯಾಗಿದ್ದಾರೆ ಎನ್ನಲಾಗಿದೆ. ಕಾರಿನಲ್ಲಿ ಇಬ್ಬರು ಯುವತಿಯರ ಜೊತೆ ಮತ್ತಿಬ್ಬರು ಯುವಕರು ಇದ್ದರು ಎನ್ನಲಾಗಿದೆ. ಕಾರಿನಲ್ಲಿ ಎಣ್ಣೆ ಬಾಟಲಿಗಳು, ಕಾಂಡೋಮ್ ಪಾಕೇಟ್ಸ್ ಸಿಕ್ಕಿದ್ದು ಕುಡಿದ ನಶೆಯಲ್ಲೇ ಅತಿ ವೇಗದಲ್ಲಿ ಕಾರು ಚಲಾಯಿಸಿ ಅಪಘಾತ ಪಡಿಸಿದ್ದಾರೆ ಅಂತಾ ಸ್ಥಳೀಯರು ಹೇಳುತ್ತಿದ್ದಾರೆ.

ಪೊಲೀಸ್ ವಾಹನದಲ್ಲಿ..
ಇನ್ನು ಗಂಭೀರ ಗಾಯಗೊಂಡಿದ್ದ ಗಾಯಾಳುಗಳನ್ನು ಅದೇ ಮಾರ್ಗದಲ್ಲಿ ಬರುತ್ತಿದ್ದ ಪೊಲೀಸು ವಾಹನದಲ್ಲಿ ಆಸ್ಪತ್ರೆಗೆ ರವಾನಿಸಲಾಗಿದೆ.

error: Content is protected !!