ಮುಂಡಗೋಡ ತಾಲೂಕಿನ ನಂದಿಗಟ್ಟಾ ಗ್ರಾಮದಲ್ಲಿ ವ್ಯಕ್ತಿಯೋರ್ವ ನೇಣಿಗೆ ಶರಣಾದ ಘಟನೆ ನಡೆದಿದೆ. ಗ್ರಾಮ ಪಂಚಾಯತಿ ಪಕ್ಕದಲ್ಲೇ ಬಾಡಿಗೆ ರೂಂ ಹಿಂದಿನ ಕಿಡಕಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಹುಬ್ಬಳ್ಳಿ ಮೂಲದ ಪ್ರಭಾಕರ್ (45)ಎಂಬ ವ್ಯಕ್ತಿಯೇ ನೇಣಿಗೆ ಶರಣಾದವನು ಎನ್ನಲಾಗಿದೆ. ಈತ ಕಳೆದ ಕೆಲ ತಿಂಗಳ ಹಿಂದಷ್ಟೇ ನಂದಿಗಟ್ಟಾ ಗ್ರಾಮದಲ್ಲಿ ಬಂದು ಅಂಗಡಿ ನಡೆಸುತ್ತಿದ್ದ. ಆದ್ರೆ ಅದೇನು ಕಾರಣವೋ ನಿನ್ನೆ ರಾತ್ರಿ ನೇಣಿಗೆ ಶರಣಾಗಿದ್ದಾನೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸದ್ಯ ಮುಂಡಗೋಡ ಪೊಲೀಸರು ಸ್ಥಳಕ್ಕೆ ಆಗಮಿಸುತ್ತಿದ್ದಾರೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.