ಮುಂಡಗೋಡ ತಾಲೂಕಿನ ಪಾಳಾದಲ್ಲಿ ನಡೆದಿದ್ದ ಅಪ್ರಾಪ್ತ ಬಾಲಕಿ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆ ಪ್ರಕಟವಾಗಿದೆ. ಜಿಲ್ಲಾ ಫೋಕ್ಸೋ ನ್ಯಾಯಾಲಯ ಅಪರಾಧಿಗೆ ಕಠಿಣ ಶಿಕ್ಷೆ ನೀಡಿದೆ. 20 ವರ್ಷ ಜೈಲಿನ ಜೊತೆಗೆ 1 ಲಕ್ಷ ರೂ. ದಂಡ ಹಾಗೂ ಸಂತ್ರಸ್ಥೆಗೆ 3 ಲಕ್ಷ ರೂ. ಪರಿಹಾರ ನೀಡಬೇಕು ಅಂತಾ ಪೋಕ್ಸೋ ನ್ಯಾಯಾಲಯ ತೀರ್ಪು ನೀಡಿದೆ.
ಅಂದಹಾಗೆ, ಪಾಳಾ ಗ್ರಾಮದ ದೇವರಾಜ್ ಶಿವಪುರ ಎಂಬುವ ವ್ಯಕ್ತಿ ಕಳೆದ ವರ್ಷ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ. ಈ ಕುರಿತು ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಹೀಗಾಗಿ, ಮುಂಡಗೋಡ ಪೊಲೀಸರು ಫೋಕ್ಸೋ ಅಡಿ ಪ್ರಕರಣ ದಾಖಲಿಸಿಕೊಂಡು ಕಾನೂನು ಕ್ರಮ ಕೈಗೊಂಡಿದ್ದರು. ಫೋಕ್ಸೋ ನ್ಯಾಯಾಲಯಕ್ಕೆ ಆರೋಪಿಯ ವಿರುದ್ಧ ಬಲಿಷ್ಟ ಆರೋಪ ಪಟ್ಟಿ ಸಲ್ಲಿಸಿದ್ದರು. ಇನ್ನು ಈ ಪ್ರಕರಣದಲ್ಲಿ ಶುಭಾ ಗಾಂವಕರ್ ವಾದ ಮಂಡಿಸಿದ್ದರು.