ಧಾರವಾಡ ಜಿಲ್ಲೆಯ ಕಲಘಟಗಿಯಲ್ಲಿ ಕಬ್ಬು ಬೆಳೆಗಾರರು ಇವತ್ತು ಆಕ್ರೋಶಗೊಂಡಿದ್ರು. ಕಬ್ಬಿಗೆ ಎಫ್ಆರ್ಪಿ ಬೆಲೆಯನ್ನು ಹೆಚ್ಚುಗೊಳಿಸುವಂತೆ ಆಗ್ರಹಿಸಿ ಶಾಸಕರ ನಿವಾಸದ ಎದುರು ಧರಣಿ ಕುಳಿತಿದ್ರು. ಅಂದಹಾಗೆ, ಕಲಘಟಗಿ ತಾಲೂಕು ಹಾಗೂ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ರೈತರು ಈ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ರು.
ಅಂದಹಾಗೆ, ರಾಜ್ಯ ಕಬ್ಬು ಬೆಳೆಗಾರ ಸಂಘದ ಪದಾಧಿಕಾರಿಗಳು ರೈತರು ಬೆಂಗಳೂರಿನ ಫ್ರೀಡಂ ಪಾರ್ಕಲ್ಲಿ 14 ದಿನದಿಂದ ಅಹೋ ರಾತ್ರಿ ಧರಣಿ’ ಚಳುವಳಿ ನಡೆಸುತ್ತಿದ್ದರು ರಾಜ್ಯ ಸರ್ಕಾರ ಯಾವುದೇ ತೀರ್ಮಾನ ಪ್ರಕಟಿಸಿದೆ ಕಬ್ಬು ಬೆಳೆದ ರೈತರನ್ನ ನಿರ್ಲಕ್ಷ್ಯ ಮಾಡಿದೆ, ತಾವು ಅಡಳಿತ ಪಕ್ಷದ ಶಾಸಕರಾಗಿ ನಮ್ಮೆಲ್ಲರ ಪ್ರತಿನಿಧಿಯಾಗಿರುವ ಕಾರಣ, ನಮ್ಮ ಒತ್ತಾಯಗಳ ಬಗ್ಗೆ ಕೂಡಲೇ ಸರ್ಕಾರದ ಗಮನ ಸೆಳೆದು ನ್ಯಾಯ ಕೊಡಿಸಬೇಕು ಅಂತಾ ಕಲಘಟಗಿ ಬಿಜೆಪಿ ಶಾಸಕ ಸಿ.ಎಂ. ನಿಂಬಣ್ಣವರ್ ರಿಗೆ ಒತ್ತಾಯಿಸಿದ್ದಾರೆ.
ಕಬ್ಬು ಬೆಳೆಗೆ ಎಫ್ ಅರ್ ಪಿ ದರ ನಿಗದಿ ಮಾಡಿದ ಕೇಂದ್ರ ಸರ್ಕಾರ, ರೈತರ ಉತ್ಪಾದನಾ ವೆಚ್ಚಕ್ಕಿಂತ ಕಡಿಮೆ ದರ ನಿಗದಿ ಮಾಡಿದೆ. ಹಾಗೂ ಸಕ್ಕರೆ ಇಳುವರಿ ಮಾನದಂಡವನ್ನು 10ರಿಂದ 10.25ಕ್ಕೆ ಏರಿಕೆ ಮಾಡಿದೆ, ಇದು ರೈತರಿಗೆ ನಷ್ಟವಾಗಿದೆ. ಕಬ್ಬಿನಿಂದ ಬರುವ ಇತರೆ ಉತ್ಪನ್ನಗಳ ಲಾಭ ಹಂಚಿಕೆ ಮಾಡಿ ರೈತರಿಗೆ ಹೆಚ್ಚುವರಿ ದರ ನಿಗದಿ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.
ಕಬ್ಬು ಹೆಚ್ಚುವರಿ ದರ ನಿಗದಿ ಬಗ್ಗೆ ರಾಜ್ಯ ಸರ್ಕಾರ ನಾಲ್ಕಾರು ಸಭೆಗಳನ್ನು ನಡೆಸಿ, ತಜ್ಞರ ಸಮಿತಿ ರಚಿಸಿ ಐದು ದಿನದಲ್ಲಿ ವರದಿ ಪಡೆದು ಯಾವುದೇ ನಿರ್ಧಾರ ಪ್ರಕಟಿಸದೆ ಇರುವುದು ರಾಜ್ಯ ಸರ್ಕಾರಕ್ಕೆ ಶೋಭೆ ತರುವುದಿಲ್ಲ. ರೈತರಿಗೆ ನ್ಯಾಯ ನೀಡುವುದಾಗಿ ಭರವಸೆ ನೀಡಿ ವಿಳಂಬ ನೀತಿ ಅನುಸರಿಸುತ್ತಿರುವುದು ಸರಿಯಲ್ಲ ಎಂದು ರೈತರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
ರಾಜ್ಯದಲ್ಲಿ 30 ಲಕ್ಷ ಕಬ್ಬು ಬೆಳೆಗಾರರಿದ್ದಾರೆ, 30ಸಾವಿರ ಕೋಟಿ ವಹಿವಾಟು ನಡೆಸಲಾಗುತ್ತಿದೆ. ರಾಜ್ಯ ಸರ್ಕಾರಕ್ಕೆ 5 ಸಾವಿರ ಕೋಟಿ ತೆರಿಗೆ ಬರುತ್ತಿದೆ ಆದರೂ ನಿರ್ಲಕ್ಷತನ ತೋರುತ್ತಿದೆ. ಇನ್ನು ಕರ್ನಾಟಕ ರಾಜ್ಯಕ್ಕಿಂತ ಕಡಿಮೆ ಸಕ್ಕರೆ ಇಳುವರಿ ಬರುವ ಪಂಜಾಬ್ ರಾಜ್ಯದಲ್ಲಿ 3800ರೂ., ಉತ್ತರ ಪ್ರದೇಶದಲ್ಲಿ 3500 ರೂ, ಮಹಾರಾಷ್ಟ್ರದಲ್ಲಿ 3,200 ರೂ, ಗುಜರಾತ್ ನಲ್ಲಿ 4400 ರೂ. ದರ , ತಮಿಳುನಾಡಿನಲ್ಲಿ ಕಬ್ಬು ಸಾಗಾಣಿಕೆ ವೆಚ್ಚವನ್ನು ಕಾರ್ಖಾನೆಗಳ ಬರಿಸುವ ನಿಯಮ ಜಾರಿಯಲ್ಲಿದೆ ಅಯಾ ರಾಜ್ಯ ಸರ್ಕಾರಗಳ ಹೆಚ್ಚುವರಿ ದರ ನಿಗದಿ ಮಾಡಿದ್ದಾರೆ. ಹೀಗಾಗಿ ಸರ್ಕಾರ ರಾಜ್ಯದ ಕಬ್ಬು ಬೆಳೆಗಾರರ ಹಿತದೃಷ್ಟಿ ಕಾಪಾಡಬೇಕು ಅಂತಾ ಆಗ್ರಹಿಸಿದ್ದಾರೆ ರೈತರು.