ಲಾಡ್ಜ್ ನಲ್ಲಿ ನೇಣಿಗೆ ಶರಣಾದ ಪ್ರೇಮಿಗಳು, ಒಂದೇ ಕುಣಿಕೆಗೆ ಕೊರಳೊಡ್ಡಿದ ಯುವಕ, ಯುವತಿ

ಧಾರವಾಡ: ಲಾಡ್ಜ್ ನಲ್ಲಿ ಪ್ರೇಮಿಗಳು ನೇಣಿಗೆ ಶರಣಾಗಿದ್ದಾರೆ. ಧಾರವಾಡ ಜಿಲ್ಲೆಯ ನವಲಗುಂದ ಪಟ್ಟಣದ ಬಸ್ ಸ್ಟಾಂಡ್ ಪಕ್ಕದ ಲಾಡ್ಜ್ ನಲ್ಲಿ ಘಟನೆ ನಡೆದಿದೆ.

ಮಧ್ಯಾಹ್ನದ ವೇಳೆಗೆ ಯುವಕ ಯುವತಿ ಲಾಡ್ಜ್ ಗೆ ತೆರಳಿದ್ದರು ಎನ್ನಲಾಗಿದೆ. ಸಂಜೆ ಲಾಡ್ಜ್ ರೂಮಿನಿಂದ ಹೊರ ಬರದೇ ಇದ್ದಾಗ ಅನುಮಾನಗೊಂಡ ಲಾಡ್ಜ್ ಸಿಬ್ಬಂದಿಗಳು ಬಾಗಿಲು ತೆರೆದು ನೋಡಿದ್ದಾರೆ‌. ಈ ವೇಳೆ ಪ್ರೇಮಿಗಳು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರೋದು ಬೆಳಕಿಗೆ ಬಂದಿದೆ.

ಇನ್ನು ಆತ್ಮಹತ್ಯೆ ಮಾಡಿಕೊಂಡಿರೋ ಪ್ರೇಮಿಗಳ ಹೆಸರು, ವಿಳಾಸದ ಮಾಹಿತಿ ಇನ್ನೂ ಲಭ್ಯವಾಗಿಲ್ಲ. ಆದ್ರೆ, ತಮ್ಮ ಪ್ರೀತಿಗೆ ಮನೆಯವರು ಅಡ್ಡಿ ಆಗಿರೋ ಕಾರಣಕ್ಕೆ ಆತ್ಮಹತ್ಯೆ ಶಂಕೆ ವ್ಯಕ್ತವಾಗಿದೆ.ಸ್ಥಳಕ್ಕೆ ನವಲಗುಂದ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

error: Content is protected !!