ಮುಂಡಗೋಡ ಹೊರವಲಯದಲ್ಲಿ ಭೀಕರ ಅಪಘಾತ, ಸ್ಕಾರ್ಪಿಯೋ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮುಂಡಗೋಡ: ಹೊರವಲಯದ ಶಿರಸಿ ರಸ್ತೆಯಲ್ಲಿ ಭೀಕರ ಅಪಘಾತವಾಗಿದೆ. ಓವರ್ ಟೇಕ್ ಮಾಡಲು ಹೋದ ಸ್ಕಾರ್ಪಿಯೊ ಬೈಕ್ ಗೆ ಗುದ್ದಿ ಬೈಕ್ ಸವಾರ ಸ್ಥಳದಲ್ಲೇ ಸಾವು ಕಂಡಿದ್ದಾನೆ.

ಶಿರಸಿ ರಸ್ತೆಯ ದೇಶಪಾಂಡೆ ರೂಡಿಸೇಟಿ ಕಚೇರಿ ಬಳಿ ಘಟನೆ ನಡೆದಿದೆ. ಶಿರಸಿ ಕಡೆಯಿಂದ ಮುಂಡಗೋಡು ಕಡೆಗೆ ಬರುತ್ತಿದ್ದ ಬೈಕ್ ಗೆ, ಅದೇ ಮಾರ್ಗವಾಗಿ ಹೊರಟಿದ್ದ ಸ್ಕಾರ್ಪಿಯೊ ಕಾರು ಓವರ್ ಟೇಕ್ ಮಾಡಲು ಹೋಗಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ‌. ಬೈಕ್ ಸವಾರನ ಗುರುತು ಪತ್ತೆಯಾಗಿಲ್ಲ. ಆದ್ರೆ, ಬೈಕ್ ಮಾಲೀಕ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನವರು ಎಂಬುವುದು ತಿಳಿದು ಬಂದಿದೆ. ಇ‌ನ್ನು, ಬೈಕ್ ಗೆ ಡಿಕ್ಕಿ ಹೊಡೆದ ಸ್ಕಾರ್ಪಿಯೊ ದೇಶಪಾಂಡೆ ರೂಡಸೇಟಿ ಕಂಪೌಂಡಿಗೆ ಡಿಕ್ಕಿಹೊಡೆದಿದೆ. ಅಪಘಾತದ ನಂತರ ಕಾರಿನಲ್ಲಿದ್ದವರು, ಕಾರು ಬಿಟ್ಟು ಪರಾರಿಯಾಗಿದ್ದಾರೆ‌.

ಸದ್ಯ ಮುಂಡಗೋಡ ಪಿಐ ಸಿದ್ದಪ್ಪ ಸಿಮಾನಿ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

error: Content is protected !!