ಮಳಗಿಯಲ್ಲಿ ಪಿಕ್ ನಿಕ್ ಗೆ ಹೊರಟಿದ್ದ ಟ್ರಾಕ್ಟರ್ ಪಲ್ಟಿ, 40ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಗೆ ಗಾಯ..!


ಮುಂಡಗೋಡ ತಾಲೂಕಿನ ಮಳಗಿಯಲ್ಲಿ ವಿದ್ಯಾರ್ಥಿಗಳನ್ನು ಪಿಕ್ ನಿಕ್ ಗೆ ಕರೆದೊಯ್ಯುತ್ತಿದ್ದ ಟ್ರಾಕ್ಟರ್ ಪಲ್ಟಿಯಾಗಿದೆ‌. ಪರಿಣಾಮ ಟ್ರಾಕ್ಟರಿನಲ್ಲಿದ್ದ ಸುಮಾರು 40-45 ವಿದ್ಯಾರ್ಥಿನಿಯರಿಗೆ ಗಾಯವಾಗಿದೆ. ಅದ್ರಲ್ಲಿ, ಹಲವರ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ.

ಪಿಕ್ ನಿಕ್ ಗೆ ಹೊರಟಿದ್ದರು..!
ಇಂದು ಮಳಗಿಯ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳನ್ನು ಟ್ರಾಕ್ಟರ್ ಮೂಲಕ ಪಿಕ್ ನಿಕ್ ಗೆ ಅಂತಾ ಮಳಗಿಯಿಂದ ಕೊಳಗಿಗೆ ಕರೆದೊಯ್ಯಲಾಗಿತ್ತು. ಈ ವೇಳೆ ಪಿಕ್ ನಿಕ್ ಮುಗಿಸಿಕೊಂಡು ವಾಪಸ್ ಬರುವ ವೇಳೆ ಚಾಲಕನ ನಿಯಂತ್ರಣ ತಪ್ಪಿ ಟ್ರಾಕ್ಟರ್ ಪಲ್ಟಿಯಾಗಿದೆ ಎನ್ನಲಾಗಿದೆ. ಸದ್ಯ ಗಾಯಾಳುಗಳನ್ನು ಮಳಗಿ ಸರ್ಕಾರಿ ಆಸ್ಪತ್ರೆಗೆ ಹಾಗೂ ಗಂಭೀರ ಗಾಯಗೊಂಡವರನ್ನು ಶಿರಸಿ ಆಸ್ಪತ್ರೆಗೆ ರವಾನಿಸಲಾಗಿದೆ.

ಉಪನ್ಯಾಸಕರೇ ಚಾಲಕರಾ..?
ಅಸಲು, ಈ ಮಳಗಿ ಪದವಿ ಪೂರ್ವ ಕಾಲೇಜಿನ ಅದ್ಯಾರ ತಲೆಯಲ್ಲಿ ಈ ಐಡಿಯಾ ಬಂದಿತ್ತೊ ಗೊತ್ತಿಲ್ಲ. ಪಿಕ್ ನಿಕ್ ಗೆ ಟ್ರಾಕ್ಟರ್ ಮೇಲೆ ತೆರಳಿದ್ದರು. ಅಲ್ಲದೆ, ಇಲ್ಲಿನ ಇಬ್ಬರು ಉಪನ್ಯಾಸಕರೇ ಟ್ರಾಕ್ಟರ್ ಚಲಾಯಿಸಿಕೊಂಡು ಹೊರಟಿದ್ದರು ಎನ್ನುವ ಮಾಹಿತಿ ಲಭ್ಯವಾಗಿದೆ. ಎರಡು ಟ್ರಾಕ್ಟರ್ ಮೂಲಕ ತೆರಳಿದ್ದ ತಂಡ, ಉಪನ್ಯಾಸಕರ ಎಡವಟ್ಟಿನಿಂದ ಧಿಮಾಕು ಮಾಡಲು ಹೋಗಿ ಅನಾಹುತ ಸಂಭವಿಸಿತಾ..? ಇನ್ನಷ್ಟೇ ಮಾಹಿತಿ ತಿಳಿದು ಬರಬೇಕಿದೆ.

ಸದ್ಯ ಮುಂಡಗೋಡ ಪಿಐ ಸಿದ್ದಪ್ಪ ಸಿಮಾನಿ ಸ್ಥಳಕ್ಕೆ ಭೇಟಿ ‌ನೀಡಿದ್ದು ಮುಂದಿನ ಕ್ರಮ ಕೈಗೊಂಡಿದ್ದಾರೆ.