ವಿ.ಎಸ್.ಪಾಟೀಲರ ಕಾರಿಗೆ ಹಿಂಬದಿಯಿಂದ ಗುದ್ದಿದ ಟ್ರಾಕ್ಟರ್,ಅದೃಷ್ಟವಶಾತ್ ತಪ್ಪಿದ ಅನಾಹುತ..!

ಮುಂಡಗೋಡ: ಮಾಜಿ ಶಾಸಕ, ಯಲ್ಲಾಪುರ ಕ್ಷೇತ್ರದ ಸಂಭವನೀಯ ಕಾಂಗ್ರೆಸ್ ಅಭ್ಯರ್ಥಿ ವಿ.ಎಸ್.ಪಾಟೀಲರ ಕಾರಿಗೆ ಪುಟ್ಟ ಅಪಘಾತವಾಗಿದೆ. ಮುಂಡಗೋಡ ಪಟ್ಟಣದ ಬನ್ನಿಕಟ್ಟಿ ಹತ್ತಿರ ಕಬ್ಬು ತುಂಬುವ ಟ್ರಾಕ್ಟರ್ ಹಿಂಬದಿಗೆ ಎರಡು ಬಾರಿ ಗುದ್ದಿದ ಪರಿಣಾಮ ಕಾರಿನ ಹಿಂಬದಿಯ ಭಾಗ ಕೊಂಚ ಜಖಂ ಆಗಿದೆ. ಅದೃಷ್ಟವಶಾತ್ ವಿ.ಎಸ್.ಪಾಟೀಲರಿಗೆ ಯಾವುದೇ ಅಪಾಯವಾಗಿಲ್ಲ.

ಮುಂಡಗೋಡಿನಿಂದ ಯಲ್ಲಾಪುರ ಕಡೆಗೆ ಹೊರಟಿದ್ದ ಮಾಜಿ ಶಾಸಕ ವಿ.ಎಸ್.ಪಾಟೀಲರ ಕಾರಿಗೆ, ಹಿ‌ಂದಿನಿಂದ ಅದೇ ಮಾರ್ಗದಲ್ಲಿ ಹೊರಟಿದ್ದ ಕಬ್ಬು ಸಾಗಿಸುವ ಟ್ರಾಕ್ಟರ್ ಗುದ್ದಿದೆ ಅಂತಾ ಹೇಳಲಾಗ್ತಿದೆ. ಹೀಗಾಗಿ, ತಕ್ಷಣವೇ ಸ್ಥಳೀಯರು ಟ್ರಾಕ್ಟರ್ ಚಾಲಕನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ ಎನ್ನಲಾಗಿದೆ.

error: Content is protected !!