ಕತ್ತಲಲ್ಲಿ ಸುಸ್ಸು ಮಾಡೋಕೆ ಹೋಗಿದ್ದ ಪ್ರವಾಸಿಗ ಬಾವಿಯಲ್ಲಿ ಬಿದ್ದ..! ಮುಂದೇನಾಯ್ತು..?

ಗೋಕರ್ಣ: ಮೂತ್ರ ವಿಸರ್ಜನೆಗೆ ಹೋಗಿ ಪ್ರವಾಸಿಗನೊಬ್ಬ ಬಾವಿಗೆ ಬಿದ್ದು ಕೆಲಹೊತ್ತು ಅಲ್ಲೇ ಪರದಾಡಿದ ವಿಚಿತ್ರ ಘಟನೆ ಕುಮಟಾ ತಾಲೂಕಿನ ಗೋಕರ್ಣದ ಮೇಲಿನಕೇರಿಯಲ್ಲಿ ನಡೆದಿದೆ.

ದೆಹಲಿ ಮೂಲದ ರಾಮೇಶ್ವರ್ ಬಾವಿಗೆ ಬಿದ್ದ ಪ್ರವಾಸಿಗನಾಗಿದ್ದಾನೆ. ಯುವತಿಯೊಂದಿಗೆ ಗೋಕರ್ಣದ ಪ್ರವಾಸಕ್ಕೆ ಬಂದಿದ್ದ ಯುವಕ,
ಮೂತ್ರವಿಸರ್ಜನೆಗೆ ಎಂದು ಕತ್ತಲಲ್ಲಿ ತೆರಳಿದ್ದಾಗ ತೆರದ ಬಾವಿಗೆ ಬಿದ್ದಿದ್ದ, ಹೀಗಾಗಿ, ಬಾವಿಯಲ್ಲಿ ಬಿದ್ದು ಹೊರಬರಲಾರದೇ ಕೆಲಹೊತ್ತು ಅಲ್ಲೇ ಪರದಾಡಿದ್ದ. ನಂತರ ಅಗ್ನಿಶಾಮಕದಳದ ಸಿಬ್ಬಂದಿ ಹಾಗೂ ಪೊಲೀಸರಿಂದ ರಕ್ಷಣೆ ಮಾಡಲಾಗಿದೆ.
ಗೋಕರ್ಣ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

error: Content is protected !!