ಕಾರವಾರ: ಕೇರಳಕ್ಕೆ ಅಕ್ರಮವಾಗಿ ದಾಖಲೆ ಇಲ್ಲದೆ ಹಣ ಸಾಗಿಸುತ್ತಿದ್ದ ವ್ಯಕ್ತಿ ಸಿಕ್ಕಿಬಿದ್ದಿದ್ದಾನೆ. ಕಾರವಾರ ರೈಲು ನಿಲ್ದಾಣದಲ್ಲಿ ರೈಲ್ವೆ ಪೊಲೀಸರು ಕಾರ್ಯಾಚರಣೆ ನಡೆಸಿ, ಮಂಗಳ ಎಕ್ಸ್ ಪ್ರೆಸ್ ರೈಲಿನಲ್ಲಿ ದಾಖಲೆ ರಹಿತ ಹಣ ಸಾಗಿಸುತ್ತಿದ್ದ ವೇಳೆ ಬಂಧಿಸಲಾಗಿದೆ.
ಮಹಾರಾಷ್ಟ್ರ ಮೂಲದ ವಿಕಾಸ್ ರಮೇಶ್ ದೋಕಲೆ ಬಂಧಿತ ವ್ಯಕ್ತಿಯಾಗಿದ್ದು, ಬಂಧಿತನಿಂದ ದಾಖಲೆ ರಹಿತ ರೂ.20,09,720 ವಶಕ್ಕೆ ಪಡೆಯಲಾಗಿದೆ. ಮಹಾರಾಷ್ಟ್ರ ದಿಂದ ಕೇರಳಕ್ಕೆ ಹಣ ಕೊಂಡೊಯ್ಯುತಿದ್ದನು ಎನ್ನಲಾಗಿದ್ದು,
ರೈಲ್ವೆ ಪೊಲೀಸರಿಂದ ಕಾರವಾರ ನಗರ ಠಾಣೆ ಪೊಲೀಸರಿಗೆ ಪ್ರಕರಣ ಹಸ್ತಾಂತರವಾಗಿದೆ.