ಮೈಲಾರ: “ಅಂಬಲಿ ಹಳಸಿತು ಕಂಬಳಿ ಬಿಸಿತಲೆ ಪರಾಕ್” ಇದು ಪ್ರಸಕ್ತ ವರ್ಷದ ಐತಿಹಾಸಿಕ ಮೈಲಾರಲಿಂಗೇಶ್ವರ ಕಾರ್ಣಿಕ ನುಡಿ. ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಮೈಲಾರ ಗ್ರಾಮದಲ್ಲಿ ನಡೆದ ಕಾರ್ಣಿಕೋತ್ಸವದಲ್ಲಿ, ವೃತಾದಾರಿ ಗೊರವಯ್ಯ ನುಡಿದ ಕಾರ್ಣಿಕ ನುಡಿ.

ಗೊರವಯ್ಯ ರಾಮಪ್ಪ ಎಂಬುವವರು 14 ಅಡಿ ಎತ್ತರದ ಬಿಲ್ಲನ್ನೇರಿ ಪ್ರಸಕ್ತ ವರ್ಷದ ಕಾರ್ಣಿಕ ಭವಿಷ್ಯ ನುಡಿದಿದ್ದಾರೆ. ಅಂಬಲಿ ಹಳಸಿತು ಕಂಬಳಿ ಬಿಸಿತಲೆ ಎಂಬ ಕಾರ್ಣಿಕ ವಿಶ್ಲೇಷಣೆ ಮಾಡಲಾಗಿದೆ. ಡೆಂಕಣಮರಡಿಯಲ್ಲಿ ದೇವಸ್ಥಾನದ ಧರ್ಮದರ್ಶಿ ವೆಂಕಪ್ಪಯ್ಯ ಒಡೆಯರ್ ಕಾರ್ಣಿಕ ವಿಶ್ಲೇಷಣೆ ಮಾಡಿದ್ದಾರೆ.

ರಾಜಕೀಯ, ಕೃಷಿ
ಈ ಬಾರಿಯ ಕಾರ್ಣಿಕ ನುಡಿಯ ಪ್ರಕಾರ, ಪ್ರಾಮಾಣಿಕವಾಗಿ, ನಿಷ್ಠೆಯಿಂದ ಇರುವವರೊಬ್ಬರು ರಾಜ್ಯವನ್ನು ಆಳುತ್ತಾರೆ ಎಂಬ ಭವಿಷ್ಯ ನುಡಿದಿದ್ದಾರೆ. ಇನ್ನು ಪ್ರಸಕ್ತ ವರ್ಷವೂ ಮಳೆಯ ಪ್ರಮಾಣ ಜಾಸ್ತಿಯಾಗಲಿದೆ. ಬೆಳೆಯೂ ಜಾಸ್ತಿ ಆಗಲಿದೆ, ರೈತರಿಗೆ ಒಳ್ಳೆಯದಾಗುತ್ತದೆ. ಇದರ ಜೊತೆಗೆ ಮಳೆ ಜಾಸ್ತಿಯಾಗಿ ಬೆಳೆ ಹಾನಿಯೂ ಆಗಲಿದೆ ಅನ್ನೋ ತಾತ್ಪರ್ಯವನ್ನು ವಿವರಿಸಲಾಗಿದೆ.

error: Content is protected !!