ಮುಂಡಗೋಡ ಪಟ್ಟಣದ ಹೊಸ ಓಣಿಯಲ್ಲಿ ಬೆಂಕಿ ಅವಘಡವಾಗಿದೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಆಕಸ್ಮಿಕ ಬೆಂಕಿ ತಗುಲಿ ಅಪಾರ ಹಾನಿಯಾಗಿದೆ. ಸ್ಥಳೀಯರು, ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿಗಳ ಮುಂಜಾಗ್ರತೆಯಿಂದ ಆಗಬಹುದಾಗಿದ್ದ ಭಾರೀ ಅನಾಹುತ ತಪ್ಪಿದಂತಾಗಿದೆ.
ಹೊಸ ಓಣಿಯ ರಾಜು ಹಿರೇಮಠ ಎಂಬುವವರಿಗೆ ಸೇರಿದ ಮನೆಯಲ್ಲಿ, ವೀಣಾ ಬಾಳಂಬೀಡ ಎನ್ಹುವವರು ಬಾಡಿಗೆ ಇದ್ದರು. ಇಂದು ಬೆಳಿಗ್ಗೆ ಮನೆಗೆ ಬೀಗ ಹಾಕಿಕೊಂಡು ಕೆಲಸಕ್ಕೆ ಹೋದ ನಂತರ ಕೆಲವೇ ಹೊತ್ತಲ್ಲಿ ಬೆಂಕಿ ತಗುಲಿ ಹೊತ್ತಿ ಉರಿದಿದೆ. ಹೀಗಾಗಿ, ಸ್ಥಳೀಯರು ತಕ್ಷಣವೇ ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದಾರೆ. ಪೊಲೀಸರೂ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಲು ಪ್ರಯತ್ನಿಸಿದ್ದಾರೆ. ನಂತರ ಅಗ್ನಿಶಾಮಕ ಸಿಬ್ಬಂದಿಗಳು ಬಂದು ಬೆಂಕಿ ನಂದಿಸಿದ್ದಾರೆ.