ಟಿಬೇಟಿಯನ್ ಕ್ಯಾಂಪ್ ನಂ.6 ರ ಕ್ರಾಸ್ ಸಮೀಪ ಬೈಕ್ ಸ್ಕಿಡ್, ಅಗಡಿಯ ಯುವಕನಿಗೆ ಗಂಭೀರ ಗಾಯ..!

ಮುಂಡಗೋಡ ತಾಲೂಕಿನ ಕಲಘಟಗಿ ರಸ್ತೆಯಲ್ಲಿ ಅಪಘಾತವಾಗಿದೆ. ಟಿಬೇಟಿಯನ್ ಕ್ಯಾಂಪ್ ನಂ.6 ರ ಕ್ರಾಸ್ ಸಮೀಪ ಬೈಕ್ ಸ್ಕಿಡ್ ಆಗಿ ಬಿದ್ದು ಅಗಡಿಯ ಯುವಕನೋರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ.

ಸಂಜು ಸಿದ್ದಪ್ಪ ಗಳಗಿ (23) ಗಂಭೀರ ಗಾಯಗೊಂಡ ಯುವಕನಾಗಿದ್ದಾನೆ. ಈತ ಗದ್ದೆಗೆ ಹೋಗಿ ವಾಪಸ್ ಅಗಡಿಗೆ ಬರುತ್ತಿದ್ದಾಗ ಬೈಕ್ ಸ್ಕಿಡ್ ಆಗಿ ಬಿದ್ದಿದ್ದಾನೆ. ಪರಿಣಾಮ ಯುವಕನ ತಲೆಗೆ ಪೆಟ್ಟಾಗಿದ್ದು, ತಕ್ಷಣವೇ ಮುಂಡಗೋಡ ತಾಲೂಕಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನಿಡಲಾಗಿದೆ. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಗೆ ರವಾನಿಸಲಾಗಿದೆ. ಮುಂಡಗೋಡ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!