ಮುಂಡಗೋಡ ತಾಲೂಕಿನ ಕಲಘಟಗಿ ರಸ್ತೆಯ ಟಿಬೇಟಿಯನ್ ಕ್ಯಾಂಪ್ ನಂ.6 ರ ಕ್ರಾಸ್ ಸಮೀಪ ಬೈಕ್ ಸ್ಕಿಡ್ ಆಗಿ ಬಿದ್ದು ಗಂಭೀರ ಗಾಯಗೊಂಡಿದ್ದ ಅಗಡಿಯ ಯುವಕ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ.
ಸಂಜು ಸಿದ್ದಪ್ಪ ಗಳಗಿ (23) ಮೃತಪಟ್ಟ ಯುವಕನಾಗಿದ್ದಾನೆ. ಈತ ಮೊನ್ನೆ ಶಿವರಾತ್ರಿಯ ದಿನ ಗದ್ದೆಗೆ ಹೋಗಿ ವಾಪಸ್ ಅಗಡಿ ಕಡೆಗೆ ಬರುತ್ತಿದ್ದಾಗ ಬೈಕ್ ಸ್ಕಿಡ್ ಆಗಿ ಬಿದ್ದಿದ್ದ. ಪರಿಣಾಮ ಯುವಕನ ತಲೆಗೆ ಗಂಭೀರ ಗಾಯವಾಗಿತ್ತು. ತಕ್ಷಣವೇ ಮುಂಡಗೋಡ ತಾಲೂಕಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನಿಡಲಾಗಿತ್ತು.
ನಂತರ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಗೆ ರವಾನಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗಿದೆ ಕಿಮ್ಸ್ ನಲ್ಲಿ ತಡರಾತ್ರಿ ಮೃತಪಟ್ಟಿದ್ದಾನೆ ಅಂತಾ ಮಾಹಿತಿ ಲಭ್ಯವಾಗಿದೆ. ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.