ಸವಣೂರಿನಲ್ಲಿ ಕರುಳು ಹಿಂಡುವ, ಹೃದಯ ವಿದ್ರಾವಕ ಘಟನೆಯೊಂದು ನಡೆದಿದೆ. ಸಾಲಮಾಡಿ ಮಗಳಮದುವೆ ಮಾಡಿದ್ದ ದಂಪತಿಗಳು ಸಾಲ ತೀರಿಸಲಾಗದೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜೊತೆಗೆ, ತಂದೆ, ತಾಯಿಯ ಸಾವು ಕಂಡ ಮಗಳೂ ಕೂಡ ನೇಣಿಗೆ ಶರಣಾಗಿದ್ದಾಳೆ. ಇದ್ರೊಂದಿಗೆ ಒಂದೇ ಕುಟುಂಬ ಮೂವರು ಸಾವಿನ ಹಾದಿ ಹಿಡಿದಿದ್ದಾರೆ.
ಹಾವೇರಿ ಜಿಲ್ಲೆ ಸವಣೂರು ತಾಲೂಕಿನ ತೊಂಡೂರು ಗ್ರಾಮದಲ್ಲಿ ಘಟಮೆ ನಡೆದಿದೆ. ತಂದೆ ಹನುಮಂತಗೌಡ ಪಾಟೀಲ (54) ತಾಯಿ ಲಲಿತಾ ಪಾಟೀಲ(50) ಮತ್ತು ಮಗಳು ನೇತ್ರಾ ಪಾಟೀಲ(22) ಆತ್ಮಹತ್ಯೆಗೆ ಶರಣಾಗಿದ್ದಾರೆ. ಸಾಲ ಮಾಡಿ ಮಗಳ ಮದುವೆಯನ್ನ ಮಾಡಿದ್ದ ಪಾಲಕರು, ಸಾಲ ತೀರಿಸಲಾಗದೆ ಮನನೊಂದಿದ್ದರು.
ಸಾಲಬಾಧೆ ತಾಳಲಾರದೆ ತಂದೆ ತಾಯಿ ಆತ್ಮಹತ್ಯೆಮಾಡಿಕೊಂಡಿದ್ದನ್ನು ಕಂಡ ಮಗಳೂ ಕೂಡ, ನನ್ನಿಂದ ತಂದೆ ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದಕ್ಕೆ ನೊಂದು ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ. ಅಂದಹಾಗೆ, ಮಗಳ ಮದುವೆಗಾಗಿ ಸುಮಾರು 25 ಲಕ್ಷರೂಪಾಯಿ ಸಾಲ ಮಾಡಿದ್ದ ಹನುಮಂತಗೌಡ ಪಾಟೀಲ್ ಸಾಲ ತೀರಿಸಲಾಗದೆ ಪರದಾಡಿದ್ದರು ಎನ್ನಲಾಗಿದೆ..
ಇನ್ನು ಸ್ಥಳಕ್ಕೆ ಸವಣೂರು ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸವಣೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡಿದಿದೆ.