ಹುನಗುಂದದ ಬಳಿ ಬೈಕ್ ಅಪಘಾತ, ಬೈಕ್ ಸವಾರನಿಗೆ ಗಾಯ, ಆಸ್ಪತ್ರೆಗೆ ರವಾನೆ..!

ಮುಂಡಗೋಡ ತಾಲೂಕಿನ ಹುನಗುಂದ ಅಗಡಿ ರಸ್ತೆಯ, ಸರ್ಕಾರಿ ಪ್ರೌಢಶಾಲೆಯ ಬಳಿ ಅಪಘಾತವಾಗಿದೆ. ಬೈಕ್ ಸ್ಕಿಡ್ ಆಗಿ ಬಿದ್ದು ಬೈಕ್ ಸವಾರ ಗಂಭೀರ ಗಾಯಗೊಂಡಿದ್ದಾನೆ.

ಹುನಗುಂದ ಗ್ರಾಮದ ರಾಚಯ್ಯ ಬಸಯ್ಯ ಬೆಂಡಿಗೇರಿ(45), ಎಂಬುವವನೇ ಗಾಯಗೊಂಡ ವ್ಯಕ್ತಿಯಾಗಿದ್ದು, ತಲೆಗೆ ಪೆಟ್ಟಾಗಿದೆ. ತಕ್ಷಣವೇ ಅಂಬ್ಯುಲೆನ್ಸ್ ಗೆ ಕರೆ‌ ಮಾಡಿದ ಸ್ಥಳೀಯರು ಅಂಬ್ಯುಲೆನ್ಸ್ ಮೂಲಕ ತಾಲೂಕಾಸ್ಪತ್ರೆಗೆ ಗಾಯಾಳುವನ್ನು ಸಾಗಿಸಿದ್ದಾರೆ. 108 ಅಂಬ್ಯುಲೆನ್ಸ್ ನಲ್ಲಿ ತಂತ್ರಜ್ಞ ಧನರಾಜ್ ಬೆಳೂರು ಗಾಯಾಳುವಿಗೆ ಪ್ರಥಮ ಚಿಕಿತ್ಸೆ ನೀಡಿ ಮುಂಡಗೋಡ ತಾಲೂಕಾಸ್ಪತ್ರೆಗೆ ರವಾಮಿಸಿದ್ದಾರೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

error: Content is protected !!