ಬೆಂಗಳೂರು : 5 ಮತ್ತು 8 ನೇ ತರಗತಿಯ ಪಬ್ಲಿಕ್ ಪರೀಕ್ಷೆ ರದ್ದುಗೊಳಿಸಿ ಹೈಕೋರ್ಟ್ ಏಕಸದಸ್ಯ ಪೀಠ ಶುಕ್ರವಾರ ಆದೇಶ ಹೊರಡಿಸಿತ್ತು. ಹೈಕೋರ್ಟ್ ಆದೇಶ ಪ್ರಶ್ನಿಸಿ ಸರ್ಕಾರ ಮೇಲ್ಮನವಿ ಸಲ್ಲಿಸಿದ್ದು, ಈ ಬಗ್ಗೆ ಹೈಕೋರ್ಟ್ ಇಂದು ತುರ್ತು ವಿಚಾರಣೆ ನಡೆಸಿತು.
ಏಕಸದಸ್ಯ ಪೀಠದ ಆದೇಶಕ್ಕೆ ತಡೆ ನೀಡಲು ಹೈಕೋರ್ಟ್ ನಿರಾಕರಿಸಿದೆ. ಈ ವಿಚಾರಣೆಯನ್ನು ಮಾ.14 ಕ್ಕೆ ಮುಂದೂಡಿ ಆದೇಶಿಸಿದೆ.
ಈ ನಡುವೆ ಮಾ.13 ರಂದು ನಡೆಯಬೇಕಿದ್ದ 5 ಮತ್ತು 8ನೇ ತರಗತಿಯ ಪಬ್ಲಿಕ್ ಪರೀಕ್ಷೆ ಮುಂದೂಡಲಾಗುವುದು ಎಂದು ರಾಜ್ಯ ರಾಜ್ಯ ಸರ್ಕಾರ ಹೇಳಿದೆ.
ಈ ಬಾರಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ರಾಜ್ಯದ 5ನೇ ತರಗತಿ ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆಯನ್ನು ನಡೆಸಲು ನಿರ್ಧರಿಸಿತ್ತು, ಆದರೆ ನಿನ್ನೆ ಹೈಕೋರ್ಟ್ ಏಕಸದಸ್ಯ ಪೀಠ ಬೋರ್ಡ್ ಪರೀಕ್ಷೆ ರದ್ದುಗೊಳಿಸಿ ಆದೇಶ ಹೊರಡಿಸಿದೆ.
ಮುಂದಿನ ವರ್ಷದಿಂದ ಪರೀಕ್ಷೆ ನಡೆಸಬಹುದು. ಮುಂದಿನ ವರ್ಷದಿಂದ ಆಯಾ ನಿಯಮಗಳಿಗನುಸಾರವಾಗಿ ಪರೀಕ್ಷೆ ನಡೆಸಬಹುದು ಎಂದು ಹೈಕೋರ್ಟ್ ಹೇಳಿದೆ.
2022-23ನೇ ಸಾಲಿನಿಂದ 5 ನೇ ತರಗತಿ ಮತ್ತು 8 ನೇ ತರಗತಿ ವಿದ್ಯಾರ್ಥಿಗಳ ಕಲಿಕಾ ಗುಣಮಟ್ಟ ಪರಿಶೀಲನೆಗಾಗಿ ಪಬ್ಲಿಕ್ ಪರೀಕ್ಷೆ ನಡೆಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ನಿರ್ಧರಿಸಿತ್ತು. ರಾಜ್ಯ ಪಠ್ಯಕ್ರಮವನ್ನು ಅನುಸರಿಸುತ್ತಿರುವ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳ 5ನೇ ತರಗತಿ ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್ ಪರೀಕ್ಷೆ ನಡೆಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ನಿರ್ಧರಿಸಿತ್ತು. ಶಿಕ್ಷಣ ಇಲಾಖೆಗೆ ನಿರ್ಧಾರಕ್ಕೆ ಪೋಷಕರು ಹಾಗೂ ವಿದ್ಯಾರ್ಥಿಗಳು ಅಸಮಾಧಾನ ಹೊರಹಾಕಿದ್ದರು. ಈ ಬೆನ್ನಲ್ಲೇ 5 ಮತ್ತು 8 ನೇ ತರಗತಿಯ ಬೋರ್ಡ್ ಪರೀಕ್ಷೆ ರದ್ದುಗೊಳಿಸಿ ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ಹೊರಡಿಸಿತ್ತು.