ಗಾಜೀಪುರ ಬಳಿ ಭೀಕರ ಅಪಘಾತ, ಚಿಗಳ್ಳಿಯ ಓರ್ವ ಯುವಕ ಸ್ಥಳದಲ್ಲೇ ಸಾವು, ಮತ್ತೋರ್ವನಿಗೆ ಗಂಭೀರ ಗಾಯ..!

ಮುಂಡಗೋಡ ತಾಲೂಕಿನ ಗಡಿಭಾಗ ಹಾಗೂ ಹಾನಗಲ್ ತಾಲೂಕಿನ ಗಾಜೀಪುರ ಬಳಿ ಭೀಕರ ಅಪಘಾತವಾಗಿದೆ. ಬೈಕ್ ಗಳ ನಡುವೆ ಮುಖಾಮುಕಿ ಡಿಕ್ಕಿಯಾದ ಪರಿಣಾಮ ಚಿಗಳ್ಳಿಯ ಯುವಕನೋರ್ವ ಸ್ಥಳದಲ್ಲೇ ಮೃತಟ್ಟಿದ್ದಾನೆ. ಮತ್ತೋರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ.

ಮುಂಡಗೋಡ ತಾಲೂಕಿನ ಚಿಗಳ್ಳಿಯ ಯಲ್ಲಪ್ಪ ಕಡೆಮನಿ(40) ಸ್ಥಳದಲ್ಲೇ ಮೃತಪಟ್ಟ ದುರ್ದೈವಿಯಾಗಿದ್ದು, ಈತ ಇವತ್ತು ತನ್ನ ಅಳಿಯನೊಂದಿಗೆ ಬೈಕ್ ಏರಿ ಹಾನಗಲ್ ಗೆ ಹೋಗಿದ್ದ. ಕೆಲಸ ಮುಗಿಸಿಕೊಂಡು ವಾಪಸ್ ಬರುತ್ತಿದ್ದಾಗ ಹಾನಗಲ್ ತಾಲೂಕಿ‌ನ ಗಾಜೀಪುರ ಬಳಿ ಬೈಕ್ ಗಳ‌ ನಡುವೆ ಡಿಕ್ಕಿ ಸಂಭವಿಸಿದೆ. ಪರಿಣಾಮ ಡಿಕ್ಕಿಯ ರಭಸಕ್ಕೆ ಯಲ್ಲಪ್ಪ ಸ್ಥಳದಲ್ಲೇ ಸಾವು ಕಂಡಿದ್ದಾನೆ‌. ಬೈಕ್ ಹಿಂಬದಿ ಕುಳಿತಿದ್ದ ಅಳಿಯನಿಗೆ ಗಂಭೀರ ಗಾಯವಾಗಿದೆ ಅನ್ನೋ ಮಾಹಿತಿ ಲಭ್ಯವಾಗಿದೆ. ಸದ್ಯ ಹಾನಗಲ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ.

ಇನ್ನು, ಅಪಘಾತದಲ್ಲಿ ಡಿಕ್ಕಿ ಹೊಡೆದ ಮತ್ತೊಂದು ಬೈಕ್ ಸವಾರರು ಕೂಸನೂರು ಗ್ರಾಮದವರಾಗಿದ್ದು ಅವ್ರ ಸ್ಥಿತಿ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ಸ್ಥಳಕ್ಕೆ ಹಾನಗಲ್ ಪೊಲೀಸರು ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಾನಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

 

error: Content is protected !!