ಶಿಗ್ಗಾವಿ: ಸಿಎಂ ತವರು ಕ್ಷೇತ್ರ ಶಿಗ್ಗಾವಿಯಲ್ಲಿ ಇಂದು ಕಾಂಗ್ರೆಸ್ ಪ್ರತಿಭಟನೆ ನಡೆಸಿದೆ. ಬಿಜೆಪಿ ಸರ್ಕಾರದ ಬ್ರಷ್ಟಾಚಾರದ ಕುರಿತು ಆಕ್ರೋಶ ವ್ಯಕ್ತ ಪಡಿಸಿ ಪ್ರತಿಭಟನಾ ಮೆರವಣಿಗೆ ನಡೆಸಿತು. ಹಾವೇರಿ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ, ಶಿಗ್ಗಾವಿ ಸವಣೂರ ಬ್ಲಾಕ್ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಸಿಎಂ ಬೊಮ್ಮಾಯಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತ ಪಡಿಸಲಾಯಿತು.
ಪಟ್ಟಣದ ಚನ್ನಮ್ನಾ ಸರ್ಕಲ್ ನಿಂದ ವಿವಿದ ಬಿದಿಗಳಲ್ಲಿ ಸಂಚರಿಸಿ ಪ್ರತಿಭಟನೆಯಲ್ಲಿ, ಮುಖ್ಯಮಂತ್ರಿಗಳ ಸ್ವಕ್ಷೇತ್ರದ ವಿವಿಧ ಇಲಾಖೆಗಳಲ್ಲಿ ನಡೆಯುತ್ತಿರುವ ಬ್ರಹ್ಮಾಂಡ ಭ್ರಷ್ಟಾಚಾರ, ಮತ್ತು 40% ಸರ್ಕಾರ ಅಂತಾ ಆರೋಪಿಸಿ ಸಿಎಂ ತವರು ನೆಲದಲ್ಲೇ ಸಿಎಂ ವಿರುದ್ಧ ಬೃಹತ್ ಪ್ರತಿಭಟನೆ ಕೈಗೊಳ್ಳಲಾಗಿತ್ತು.
ಮುಖ್ಯಮಂತ್ರಿಗಳ ಕ್ಷೇತ್ರದಲ್ಲಿ ಬಹುತೇಕ ಸರ್ಕಾರಿ ಇಲಾಖೆಗಳಲ್ಲಿ, ಮಾತು ಮಾತಲ್ಲೆ ಭ್ರಷ್ಟಾಚಾರ ನಡೆಯುತ್ತಿದೆ ಅಂತಾ ಹಾವೇರಿ ಜಿಲ್ಲಾ ಯುವ ಕಾಂಗ್ರೆಸ್ ಅದ್ಯಕ್ಷರು ಹಾಗೂ ಯುವ ಕಾಂಗ್ರೆಸ್ ತಾಲೂಕಾ ಅದ್ಯಕ್ಷರು ಸರ್ವ ಸದಸ್ಯರು ಆಕ್ರೋಶ ಹೊರಹಾಕಿದ್ರು. ಬ್ತಷ್ಟಾಚಾರದ ರಾಜ್ಯ ಸರ್ಕಾರಕ್ಕೆ ಧಿಕ್ಕಾರ ಕೂಗಿ ನಾಮಫಲಕ ಪ್ರದರ್ಶನ ಮಾಡಲಾಯಿತು.
ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಯುವ ಕಾಂಗ್ರೆಸ್ ರಾಜ್ಯ ಉಸ್ತುವಾರಿ ಬಂಟಿ ಶೇಲ್ಕೆ ಮುಖ್ಯಮಂತ್ರಿಗಳ ತವರು ಕ್ಷೇತ್ರದಲ್ಲೇ ಆಗುತ್ತಿರುವ ಭ್ರಷ್ಟಾಚಾರ ಇಡಿ ರಾಜ್ಯಕ್ಕೆ ಕೈಗನ್ನಡಿಯಾಗಿದೆ, ಬೊಮ್ಮಾಯಿ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿ ಹೋಗಿದೆ ಎಂದು ವಾಗ್ದಾಳಿ ನಡೆಸಿದರು.
ವರದಿ; ಮಂಜುನಾಥ ಪಾಟೀಲ್