ಮುಂಡಗೋಡ: ತಾಲೂಕಿನ ನ್ಯಾಸರ್ಗಿ ಡ್ಯಾಂ ನಲ್ಲಿ ಈಜಲು ನೀರಿಗೆ ಇಳಿದಿದ್ದ ವ್ಯಕ್ತಿಯೋರ್ವ ಸಾವನ್ನಪ್ಪಿದ ಘಟನೆ ನಡೆದಿದೆ. ಪುಟ್ಟ ಮಗನ ಕಣ್ಣೇದುರೇ ತಂದೆ
ನೀರಲ್ಲಿ ಮುಳುಗಿ ಸಾವು ಕಂಡಿದ್ದು ಧಾರುಣವಾಗಿದೆ.
ಲಕ್ಷ್ಮಣ ಭೀಮಣ್ಣ ಬೋವಿ (42) ಈಜಲು ಹೋಗಿ ಮೃತಪಟ್ಟ ವ್ಯಕ್ತಿಯಾಗಿದ್ದಾನೆ. ಇವನು ಮದ್ಯಾನ ನ್ಯಾಸರ್ಗಿ ಡ್ಯಾಂ ನಲ್ಲಿ ಸ್ನಾನ ಮಾಡಲೆಂದು, ಮಗನ ಬಳಿ ಬಟ್ಟೆ ಕೊಟ್ಟು ನೀರಿಗೆ ಇಳಿದಿದ್ದ ಎನ್ನಲಾಗಿದೆ. ಈ ವೇಳೆ ನೀರಲ್ಲಿ ಈಜಾಡುತ್ತಿರುವಾಗಲೇ ನಾಪತ್ತೆಯಾಗಿದ್ದಾನೆ. ಹೀಗಾಗಿ ತಂದೆ ನೀರಲ್ಲಿ ಕಣ್ಮರೆಯಾಗುತ್ತಲೇ ಆತಂಕಗೊಂಡ ಮಗ ಸ್ಥಳೀಯರಿಗೆ ವಿಷಯ ಮುಟ್ಟಿಸಿದ್ದಾನೆ.
ಇನ್ನು ಸುದ್ದಿ ತಿಳಿದ ತಕ್ಷಣವೇ ಸ್ಥಳಕ್ಕೆ ಧಾವಿಸಿದ ಮುಂಡಗೋಡ ಕ್ರೈಂ ಪಿಎಸ್ ಐ ಎನ್.ಡಿ.ಜಕ್ಕಣ್ಣವರ್ ಹಾಗೂ ಸಿಬ್ಬಂದಿಗಳು, ಅಗ್ನಿ ಶಾಮಕ ಸಿಬ್ಬಂದಿಗಳು ನೀರಿನಿಂದ ಹೊರ ತೆಗೆದಿದ್ದಾರೆ.
ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.