ವಿಧಾನಸಭೆ ಚುನಾವಣೆಗೆ ಇವತ್ತೇ ಮುಹೂರ್ತ ಫಿಕ್ಸ್: ಇವತ್ತಿನಿಂದಲೇ ನೀತಿ ಸಂಹಿತೆ ಜಾರಿ..!

ಇಂದೇ ವಿಧಾನಸಭೆ ಚುನಾವಣೆಗೆ ಮುಹೂರ್ತ ಪಿಕ್ಸ್ ಆಗಲಿದೆ. ಇಂದು ಬೆಳಿಗ್ಗೆ 11.30 ಕ್ಕೆ ಕೇಂದ್ರ ಚುನಾವಣಾ ಆಯೋಗ ಪತ್ರಿಕಾಗೋಷ್ಠಿ ನಡೆಸಿ ಚುನಾವಣೆ ದಿನಾಂಕ ಘೋಷಣೆ‌ ಮಾಡುವ ಸಾಧ್ಯತೆ ಇದೆ.

ಬೆಳಿಗ್ಗೆ 11.30 ಕ್ಕೆ ದೆಹಲಿಯ ವಿಜ್ಞಾನ ಭವನದಲ್ಲಿ ಚುನಾವಣಾ ಆಯೋಗ ಸುದ್ದಿಗೋಷ್ಠಿ ಕರೆದಿದೆ. ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಸುದ್ದಿಗೋಷ್ಠಿ ನಡೆಸಿ ಚುನಾವಣೆ ದಿನಾಂಕ ಘೋಷಣೆ ಮಾಡಲಿದ್ದಾರೆ. ಹೀಗಾಗಿ, ಇಂದಿನಿಂದಲೇ ಚುನಾವಣೆ ನೀತಿ ಸಂಹಿತೆ ಜಾರಿಯಾಗುವ ಎಲ್ಲಾ ಸಾಧ್ಯತೆ ಇದೆ.

error: Content is protected !!