ಮುಂಡಗೋಡ: ತಾಲೂಕಿನ ಬಹುತೇಕ 82 ಗ್ರಾಮಗಳಲ್ಲಿ ಸ್ಮಶಾನ ಭೂಮಿಯನ್ನು ಗುರುತಿಸಿ ಈಗಾಗಲೇ ಪಹಣಿ ಪತ್ರಿಕೆಗಳಲ್ಲಿ ದಾಖಲಿಸಲಾಗಿದೆ. ಅಲ್ಲದೇ ನಿರ್ವಹಣೆಗಾಗಿ ಸ್ಥಳೀಯ ಸಂಸ್ಥೆಗಳಿಗೆ ಹಸ್ತಾಂತರಿಸಲಾಗಿದ್ದು,
ಹೀಗಾಗಿ, ಸದ್ಯ ಸ್ಮಶಾನ ಭೂಮಿಗಾಗಿ ಕಾಯ್ದಿರಿಸಿದ ಭೂಮಿಯನ್ನು ಯಾರಾದರೂ ಒತ್ತುವರಿ ಮಾಡಿಕೊಂಡಿದ್ದರೆ ಅಂತವರ ವಿರುದ್ಧ ಕೂಡಲೇ ತಹಶೀಲ್ದಾರ ಕಚೇರಿಗೆ ದೂರು ನೀಡುವಂತೆ ಮುಂಡಗೋಡ ತಹಶೀಲ್ದಾರ್ ಶಂಕರ್ ಗೌಡಿ ಮನವಿ ಮಾಡಿದ್ದಾರೆ.
ಮುಂಡಗೋಡ ತಾಲೂಕಿನಲ್ಲಿ ಒಟ್ಟು 94 ಗ್ರಾಮಗಳಿದ್ದು ಈ ಪೈಕಿ 12 ಜನವಸತಿ ಇಲ್ಲದ ಬೇಚರಾಕ ಗ್ರಾಮಗಳಿವೆ. ಬಾಕಿ ಉಳಿದ 82 ಗ್ರಾಮಗಳಲ್ಲಿ ಈಗಾಗಲೇ ಸ್ಮಶಾನಕ್ಕಾಗಿ ಸರ್ಕಾರಿ ಭೂಮಿಯನ್ನು ಗುರುತಿಸಿ ಕಾಯ್ದಿರಿಸಲಾಗಿದೆ. ಸ್ಮಶಾನಕ್ಕಾಗಿ ಕಾಯ್ದಿರಿಸಿದ ಜಾಗಗಳನ್ನು ಈಗಾಗಲೇ ಪಹಣಿ ಪತ್ರಿಕೆಯಲ್ಲಿ ಇಂಡೀಕರಣಗೊಳಿಸಲಾಗಿದೆ, ಹಾಗೂ ಸಂಬಂಧಪಟ್ಟ ಸ್ಥಳಿಯ ಸಂಸ್ಥೆಗಳಿಗೆ ಹಸ್ತಾಂತರಿಸಲಾಗಿದೆ. ಹೀಗಾಗಿ, ಸ್ಮಶಾನಕ್ಕಾಗಿ ಕಾಯ್ದಿರಿಸಿದ ಜಾಗವು ಒತ್ತುವರಿಯಾಗಿದ್ದಲ್ಲಿ ಸಾರ್ವಜನಿಕರು ಸಂಬಂಧಪಟ್ಟ ತಹಶೀಲ್ದಾರ, ಉಪವಿಭಾಗಾಧಿಕಾರಿ ಅಥವಾ ಜಿಲ್ಲಾಧಿಕಾರಿಗಳಲ್ಲಿ ನೇರವಾಗಿ ದೂರು ಸಲ್ಲಿಸಬಹುದಾಗಿದೆ ಅಂತಾ ತಹಶೀಲ್ದಾರರು ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.