ಮುಂಡಗೋಡ ತಾಲೂಕಿನ ಅಗಡಿ ಚೆಕ್ ಪೊಸ್ಟ್ ಬಳಿ ದಾಖಲೆ ಇಲ್ಲದೇ ಸ್ಕೂಟಿಯಲ್ಲಿ ಸಾಗಿಸುತ್ತಿದ್ದ 3.40 ಲಕ್ಷ ರೂ. ವಶ ಪಡಿಸಿಕೊಳ್ಳಲಾಗಿದೆ. ಪೊಲೀಸರು ಹಾಗೂ ಕಂದಾಯ ಅಧಿಕಾರಿಗಳು ದಾಳಿ ನಡೆಸಿ ದಾಖಲೆಯಿಲ್ಲದೇ ಸಾಗಿಸುತ್ತಿದ್ದ ಹಣ ವಶಕ್ಕೆ ಪಡೆದಿದ್ದಾರೆ.
ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ರಚಿಸಲಾಗಿರೋ ಚೆಕ್ ಪೊಸ್ಟ್ ನಲ್ಲಿ ತಪಾಸಣೆ ನಡೆಸುತ್ತಿದ್ದಾಗ ದಾಖಲೆ ಇಲ್ಲದ ಹಣ ಪತ್ತೆಯಾಗಿದೆ. ಮುಂಡಗೋಡ ನೆಹರು ನಗರದ ನಿವಾಸಿ ಹಸನ ಸಾಬ್ ಮೋದಿನ್ ಸಾಬ್ ಫರೀದ್ ಎಂಬುವವರು ತಮ್ಮ ಸ್ಕೂಟಿಯಲ್ಲಿ ಹಣವನ್ನು ಕೊಂಡೊಯ್ಯುತ್ತಿದ್ದರು ಎನ್ನಲಾಗಿದೆ. ಹೀಗಾಗಿ, ಈ ವೇಳೆ ತಪಾಸಣೆ ನಡೆಸಿದಾಗ ಹಣ ಪತ್ತೆಯಾಗಿದೆ. ಆದ್ರೆ, ಹೀಗೆ ಸಿಕ್ಕ ಹಣಕ್ಕೆ ಸೂಕ್ತ ದಾಖಲೆಗಳನ್ನು ಒದಗಿಸದ ಹಿನ್ನೆಲೆಯಲ್ಲಿ ವಶಕ್ಕೆ ಪಡೆಯಲಾಗಿದೆ ಅನ್ನೋ ಮಾಹಿತಿ ಲಭ್ಯವಾಗಿದೆ.
ಮುಂಡಗೋಡ ಪಿಐ ಸಿದ್ದಪ್ಪ ಸಿಮಾನಿ ಹಾಗೂ ಮತ್ತವರ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ, ಮುಂದಿನ ಕ್ರಮ ಕೈಗೊಂಡಿದೆ.