ಅಂಕೋಲಾ: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಗರ್ಭಿಣಿ ಮಹಿಳೆಯೋರ್ವಳಿಗೆ ರಿಕ್ಷಾ ಡಿಕ್ಕಿ ಹೊಡೆದು ಮಹಿಳೆ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಭಾವಿಕೇರಿಯಲ್ಲಿ ನಡೆದಿದೆ.
ಅಪಘಾತದಲ್ಲಿ ಶೋಭಾ ಗೋಪಾಲ ನಾಯಕ (28) ಎಂಬಾಕೆಯೆ ಮೃತಪಟ್ಟ ದುರ್ದೈವಿಯಾಗಿದ್ದಾಳೆ, ಮೃತ ಮಹಿಳೆ ನಾಲ್ಕು ತಿಂಗಳ ಗರ್ಭಿಣಿಯಾಗಿದ್ದಳು ಎನ್ನಲಾಗಿದೆ. ಈಕೆ ಪತಿಯ ಜೊತೆಯಲ್ಲಿ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಆಟೋ ಚಾಲಕ ಅತಿವೇಗ ಹಾಗೂ ಅಜಾಗರೂಕತೆಯಿಂದ ಆಟೋ ಚಲಾಯಿಸಿಕೊಂಡು ಬಂದು ರಸ್ತೆಯ ತೀರಾ ಬದಿಗೆ ಬಂದು ಅಪಘಾತ ಪಡಿಸಿದ್ದಾನೆ ಎನ್ನಲಾಗಿದೆ.
ಅಪಘಾತದ ರಭಸಕ್ಕೆ ಮಹಿಳೆಯ ತಲೆಗೆ ಗಂಭೀರವಾಗಿ ಗಾಯಗೊಂಡು. ಆಕೆ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಅಪಘಾತವಾಗಿರುವುದನ್ನ ಗಮನಿಸಿದ ಚಾಲಕ ಸ್ಥಳದಲ್ಲಿ ನಿಲ್ಲಿಸದೆ ಆಟೋದೊಂದಿಗೆ ಪರಾರಿಯಾಗಿದ್ದಾನೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಈ ಬಗ್ಗೆ ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.