ಯಲ್ಲಾಪುರ ವಿಧಾನಸಭಾ ಕ್ಷೇತ್ರಕ್ಕೆ ಜೆಡಿಎಸ್ ತನ್ನ ಅಭ್ಯರ್ಥಿ ಘೋಷಣೆ ಮಾಡಿದೆ. ಪ್ರೊ. ನಾಗೇಶ್ ನಾಯ್ಕ್ ಯಲ್ಲಾಪುರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಟಿಕೆಟ್ ಗಿಟ್ಟಿಸಿಕೊಂಡಿದ್ದಾರೆ. ಆದ್ರೆ, ಜೆಡಿಎಸ್ ಟಿಕೆಟ್ ಘೋಷಣೆಯಾಗುತ್ತಿದ್ದಂತೆ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದ ಸಂತೋಷ ರಾಯ್ಕರ್ ಅಸಂತೋಷಗೊಂಡಿದ್ದಾರೆ. ತಮ್ಮ ಬೆಂಬಲಿಗರೊಂದಿಗೆ ಪ್ರತಿಭಟನೆ ನಡೆಸಿದ್ದಾರೆ.

ಪ್ರತಿಭಟನೆ..
ಜೆಡಿಎಸ್ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದ ಸಂತೋಷ ರಾಯ್ಕರ್ ತೀವ್ರ ಅಸಮಾಧಾನ ಗೊಂಡಿದ್ದಾರೆ. ಹೀಗಾಗಿ, ತಮ್ಮ ಬೆಂಬಲಿಗರೊಂದಿಗೆ ಜೆಡಿಎಸ್ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಬಂಡಾಯದ ಬಾವುಟ ಹಾರಿಸಿದ್ದಾರೆ. ಹೀಗಾಗಿ, ಮೊದಲೇ ಕ್ಷೇತ್ರದಲ್ಲಿ ಆಟಕ್ಕುಂಟು ಲೆಕ್ಕಕ್ಕಿಲ್ಲದಂತಾಗಿರೋ ಜೆಡಿಎಸ್ ಇದ್ದವರಲ್ಲೇ ಒಡೆದು ಹೋಳಾಗಿದ್ದಾರೆ. ಇನ್ನು ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಸಂತೋಷ ರಾಯ್ಕರ್ ಮಳಗಿ ಮುಂದಿನ ನಡೆ ಏನು ಅನ್ನೋದು ಕುತೂಹಲಕ್ಕೆ ಕಾರಣವಾಗಿದೆ.

error: Content is protected !!