ಮುಂಡಗೋಡ: ತಾಲೂಕಿನ ಶಿರಗೇರಿ ಗ್ರಾಮದ ಯುವಕರು, ಬೆಳಗಾವಿ ಜಿಲ್ಲೆಯ ಘಟಪ್ರಭಾ ನದಿಯಲ್ಲಿ ಈಜಲು ಹೋಗಿ ಮೃತಪಟ್ಟವರ ಸಂಖ್ಯೆ 5 ಕ್ಕೆ ಏರಿಕೆಯಾಗಿದೆ. ನೀರಲ್ಲಿ ಮುಳುಗಿ ತೀವ್ರ ಅಸ್ವಸ್ಥ ಗೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ ಅನ್ನೊ ಮಾಹಿತಿ ಲಭ್ಯವಾಗಿದೆ.
ತಾಲೂಕಿನ ಶಿರಗೇರಿ ಗ್ರಾಮದ ರಾಮಚಂದ್ರ ಜೋರೆ ಎಂಬುವನೆ ಸಾವನ್ನಪ್ಪಿದ ಮತ್ತೋರ್ವ ಯುವಕನಾಗಿದ್ದು, ನಿನ್ನೆ ಶುಕ್ರವಾರ ದುಪದಾಳ ಗ್ರಾಮದ ಸನಿಹ ಘಟಪ್ರಭಾ ನದಿಯಲ್ಲಿ 6ಜನ ಸ್ನೇಹಿತರು ಈಜಲು ಇಳಿದಿದ್ದರು ಈ ವೇಳೆ ನಾಲ್ವರು ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದು ಮತ್ತಿಬ್ಬರು ತೀವ್ರ ಅಸ್ವಸ್ಥಗೊಂಡಿದ್ದರು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದು ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ.