ಮುಂಡಗೋಡ ತಾಲೂಕಿನ ಚವಡಳ್ಳಿಯಲ್ಲಿ ಭಾರಿ ಬದಲಾವಣೆಯ ಗಾಳಿ ಬೀಸಿದೆ. ಇದುವರೆಗೂ ಬಿಜೆಪಿಯ ನೆರಳಲ್ಲಿದ್ದ ನೂರಾರು ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಅಸಲು, ಬಿಜೆಪಿ ಚವಡಳ್ಳಿ ಘಟಕದ ಅಧ್ಯಕ್ಷರೇ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಇದ್ರೊಂದಿಗೆ ಇಬ್ಬರು ಗ್ರಾಮ ಪಂಚಾಯತಿ ಸದಸ್ಯರೂ ಸೇರಿದಂತೆ, ನೂರಾರು ಕಾರ್ಯಕರ್ತರು ಕಾಂಗ್ರೆಸ್ ಕೈ ಹಿಡಿದಿದ್ದಾರೆ.
ಅಂದಹಾಗೆ, ನಿಂಗಜ್ಜ ಕೋಣನಕೇರಿ ಚವಡಳ್ಳಿ ಭಾಗದ ಸಂಭಾವಿತ, ಪ್ರಭಾವಿ ಮುಖಂಡ. ಇವ್ರು ಬಿಜೆಪಿಯ ಚವಡಳ್ಳಿ ಘಟಕದ ಅಧ್ಯಕ್ಷರೂ ಆಗಿದ್ದವರು. ಆದ್ರೆ, ರವಿವಾರ ರಾತ್ರಿ ಬಿಜೆಪಿ ತೊರೆದಿದ್ದಾರೆ. ಇವ್ರೊಂದಿಗೆ ಇಬ್ಬರು ಗ್ರಾಪಂ ಸದಸ್ಯೆಯರು, ಸೊಸೈಟಿ ಸದಸ್ಯರುಗಳು ಕಾಂಗ್ರೆಸ್ ಅಭ್ಯರ್ಥಿ ವಿ.ಎಸ್.ಪಾಟೀಲರ ಸಮ್ಮುಖದಲ್ಲಿ ಕಾಂಗ್ರೆಸ್ ಸೇರಿದ್ದಾರೆ. ಇದ್ರಿಂದ ಈ ಭಾಗದಲ್ಲಿ ಬಿಜೆಪಿಗೆ ಭಾರಿ ಮರ್ಮಾಘಾತ ನೀಡಿದ್ದಾರೆ.
ಅಸಲು, ಮುಂಡಗೋಡ ತಾಲೂಕಿನಲ್ಲಿ ಈಗ ಪಕ್ಷಾಂತರ ಪರ್ವ ಜೋರಾಗಿದೆ. ಕಾಂಗ್ರೆಸ್ ತೊರೆದು ಬಿಜೆಪಿ ಸೇರುವವರು ಸಂಖ್ಯೆಗಿಂತ, ಬಿಜೆಪಿ ತೊರೆದು ಕಾಂಗ್ರೆಸ್ ಸೇರುವವರ ಸಂಖ್ಯೆಯೇ ಹೆಚ್ಚಾಗಿದೆ. ಇತ್ತಿಚೆಗಷ್ಟೇ ಬೆಡಸಗಾಂವ್ ನಲ್ಲಿ ಹಲವು ಮುಖಂಡರು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದರು. ಅದ್ರಂತೆ, ನಂದಿಕಟ್ಟಾ, ಭಾಗಗಳಲ್ಲೂ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದ ಹತ್ತಾರು ಯುವಕರು, ಕಾರ್ಯಕರ್ತರು ಬದಲಾವಣೆಯ ಪರ್ವ ಶುರು ಮಾಡಿದ್ದಾರೆ.