ಯಲ್ಲಾಪುರ: ಕಾಂಗ್ರೆಸ್ ಅಭ್ಯರ್ಥಿ ವಿ.ಎಸ್.ಪಾಟೀಲ್ ಇಂದು ಸಾವಿರಾರು ಬೆಂಬಲಿಗರು, ಕಾರ್ಯಕರ್ತರೊಂದಿಗೆ ಸೇರಿ ನಾಮಪತ್ರ ಸಲ್ಲಿಸಿದ್ರು. ಪತ್ನಿ ಸಮೇತ ಆಗಮಿಸಿದ್ದ ವಿ.ಎಸ್.ಪಾಟೀಲ್ ಯಲ್ಲಾಪುರದ ಚುನಾವಣಾಧಿಕಾರಿಗೆ ತಮ್ಮ ನಾಮಪತ್ರ ಸಲ್ಲಿಸಿದ್ರು.
ಯಲ್ಲಾಪುರದ ಗ್ರಾಮದೇವತೆಯ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಸಾವಿರಾರು ಕಾರ್ಯಕರ್ತರೊಂದಿಗೆ ಮೆರವಣಿಗೆ ಮೂಲಕ ಮಿನಿವಿಧಾನಸೌಧಕ್ಕೆ ಬಂದ ಪಾಟೀಲರು, ಅಲ್ಲಿ 12 ಗಂಟೆಯ ನಂತರ ನಾಮಪತ್ರ ಸಲ್ಲಿಸಿದ್ರು.
ನಾಮಪತ್ರ ಸಲ್ಲಿಸಿದ ನಂತರ ಮತ್ತೆ ಮೆರವಣಿಗ ಮೂಲಕ ಕಾಂಗ್ರೆಸ್ ಕಾರ್ಯಾಲಯಕ್ಕೆ ಆಗಮಿಸಿದ ವಿ.ಎಸ್.ಪಾಟೀಲ್, ಮುಖಂಡರು, ಕಾರ್ಯಕರ್ತರೊಂದಿಗೆ ಸಭೆ ನಡೆಸಿದ್ರು. ಈ ವೇಳೆ ಯಲ್ಲಾಪುರ, ಮುಂಡಗೋಡ, ಬನವಾಸಿ ಭಾಗದ ಹಲವು ಕಾಂಗ್ರೆಸ್ ಮುಖಂಡರು ಭಾಗಿಯಾಗಿದ್ರು.