ಯಲ್ಲಾಪುರದಲ್ಲಿ ಇಂದು ಸಚಿವ ಶಿವರಾಮ್ ಹೆಬ್ಬಾರ್ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿದ್ದಾರೆ‌. ಸಾವಿರ ಸಾವಿರ ಸಂಖ್ಯೆಯ ಕಾರ್ಯಕರ್ತರೊಂದಿಗೆ ಮೆರವಣಿಗೆ ಮೂಲಕ ತೆರಳಲಿರೋ ಹೆಬ್ಬಾರ್ ಯಲ್ಲಾಪುರದ ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಲಿದ್ದಾರೆ.

ಬೆಳಿಗ್ಗೆ 10 ಗಂಟೆಗೆ..
ಅಂದಹಾಗೆ, ಇಂದು‌ ಮಂಗಳವಾರ ಬಳಿಗ್ಗೆ 10 ಗಂಟೆಗೆ ಯಲ್ಲಾಪುರದ ಗ್ರಾಮದೇವಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಅಲ್ಲಿಂದಲೇ ಕಾರ್ಯಕರ್ತರೊಂದಿಗೆ ಮೆರವಣಿಗೆ ಮೂಲಕ ತೆರಳಿ ನಾಮಪತ್ರ ಸಲ್ಲಿಸಲಿದ್ದಾರೆ.

ನೂರಾರು ವಾಹನಗಳು..!
ಕ್ಷೇತ್ರದಾದ್ಯಂತ ನೂರಾರು ವಾಹನಗಳಲ್ಲಿ ಸಾವಿರಾರು ಸಂಖ್ಯೆಯ ಕಾರ್ಯಕರ್ತರು, ನಾಮಪತ್ರ ಸಲ್ಲಿಸುವ ಕಾರ್ಯಕ್ರಮಕ್ಕೆ ಆಗಮಿಸೊ ಸಾಧ್ಯತೆ ಇದೆ. ಹೀಗಾಗಿ, ಇವತ್ತು ಯಲ್ಲಾಪುರದಲ್ಲಿ ಬಹುತೇಕ ಕೇಸರಿಮಯವಾಗುವ ಎಲ್ಲಾ ಸಾಧ್ಯತೆ ಇದೆ.

error: Content is protected !!