ಸಚಿವ ಶಿವರಾಮ್ ಹೆಬ್ಬಾರ್ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ, ಜನಸಾಗರದ ಮದ್ಯೆ ಬೃಹತ್ “ರೋಡ್ ಶೋ”

ಯಲ್ಲಾಪುರದಲ್ಲಿ ಇಂದು ಸಚಿವ ಶಿವರಾಮ್ ಹೆಬ್ಬಾರ್ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ‌. ಸಾವಿರಾರು ಸಂಖ್ಯೆಯ ಕಾರ್ಯಕರ್ತರೊಂದಿಗೆ ಬೃಹತ್ ರೋಡ್ ಶೋ ಮೂಲಕ ತಹಶೀಲ್ದಾರ್ ಕಚೇರಿಗೆ ತೆರಳಿ ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದ್ದಾರೆ.

ಬೃಹತ್ ರೋಡ್ ಶೋ..!
ಬೆಳಿಗ್ಗೆ ಯಲ್ಲಾಪುರದ ಗ್ರಾಮದೇವಿ ದೇವಸ್ಥಾನದಲ್ಲಿ ಗ್ರಾಮದೇವಿಗೆ ವಿಶೇಷ ಪೂಜೆ ಸಲ್ಲಿಸಿ, ನಂತರ ಅಲ್ಲಿಂದಲೇ ಕಾರ್ಯಕರ್ತರೊಂದಿಗೆ ಬೃಹತ್ ರೋಡ್ ಶೋ ಮೂಲಕ ತೆರಳಿ ನಾಮಪತ್ರ ಸಲ್ಲಿಸಿದ್ದಾರೆ.

ಕೇಸರಿಮಯ..!
ಇನ್ನು, ಕ್ಷೇತ್ರದಾದ್ಯಂತದಿಂದ ನೂರಾರು ವಾಹನಗಳಲ್ಲಿ ಸಾವಿರಾರು ಸಂಖ್ಯೆಯ ಕಾರ್ಯಕರ್ತರು ಆಗಮಿಸಿದ್ರು. ಕೇಸರಿ ಶಾಲು, ಟೋಪಿ, ಹಾಗೂ ಬಿಜೆಪಿ ಧ್ವಜ ಹಿಡಿದು ಮೆರವಣಿಗೆಯುದ್ದಕ್ಕೂ ಕುಣಿದು ಕುಪ್ಪಳಿಸಿದ್ರು. ಜಯಘೋಷ ಕೂಗಿ ಸಂಭ್ರಮಿಸಿದ್ರು.

error: Content is protected !!