ಅಯ್ಯಪ್ಪ ದೇವಸ್ಥಾನದ ಬಳಿ ನಡೆದಿದ್ದ ಭೀಕರ ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ನ್ಯಾಸರ್ಗಿ ಯುವಕ ಚಿಕಿತ್ಸೆ ಫಲಿಸದೇ ಸಾವು..!

ಮುಂಡಗೋಡ ಪಟ್ಟಣದ ಹೊರವಲಯದ ಅಯ್ಯಪ್ಪ ದೇವಸ್ಥಾನದ ಬಳಿ ನಿನ್ನೆ ನಡೆದಿದ್ದ ಭೀಕರ ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಸಾವನ್ನಪ್ಪಿರೋ ಮಾಹಿತಿ ಲಭ್ಯವಾಗಿದೆ.

ನ್ಯಾಸರ್ಗಿ ಗ್ರಾಮದ ಕಿರಣ್ ಫಕ್ಕೀರಪ್ಪ ಮೇದಾರ್ (25) ಮೃತ ಬೈಕ್ ಸವಾನಾಗಿದ್ದಾನೆ. ನಿನ್ನೆ ರವಿವಾರ ರಾತ್ರಿ ನಡೆದಿದ್ದ ಬೀಕರ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಕಿರಣ್ ಗೆ ಸೂಕ್ತ ಚಿಕಿತ್ಸೆಗಾಗಿ 108 ಅಂಬ್ಯುಲೆನ್ಸ್ ಮೂಲಕ ತಾಲೂಕಾಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಗೆ ರವಾನಿಸಲಾಗಿತ್ತು. ಆದ್ರೆ, ಚಿಕಿತ್ಸೆ ಫಲಿಸದೇ ಕಿಮ್ಸ್ ನಲ್ಲಿ ಕಿರಣ್ ಮೃತಪಟ್ಟಿದ್ದಾನೆ ಅಂತಾ ಮೂಲಗಳು ತಿಳಿಸಿವೆ. ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

error: Content is protected !!