ಮುಂಡಗೋಡ ಪಟ್ಟಣದ ಹೊರವಲಯದ APMC ಹತ್ತಿರದ ಕಾಡಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಅಪರಿಚಿತ ಶವ ಪತ್ತೆಯಾಗಿದೆ. ಸುಮಾರು 45 ವರ್ಷ ವಯಸ್ಸಿನ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಯಾವುದೋ ಕಾರಣಕ್ಕೆ ಕಾಡಿನಲ್ಲಿ ಬಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರೋ ಶಂಕೆ ವ್ಯಕ್ತವಾಗಿದೆ. ಕೊಳೆತು ನಾರುವ ಸ್ಥಿತಿಯಲ್ಲಿರೋ ಶವ, ಕನಿಷ್ಟ ಸುಮಾರು ಹತ್ತು ದಿನಗಳ ಹಿಂದೆ ಸಾವನ್ನಪ್ಪಿರೋ ಶಂಕೆ ವ್ಯಕ್ತವಾಗಿದೆ. ಸದ್ಯ ಮುಂಡಗೋಡ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು ಮುಂದಿನ ಕ್ರಮ ಕೈಗೊಂಡಿದ್ದಾರೆ.

error: Content is protected !!