ಯಲ್ಲಾಪುರ ರಸ್ತೆಯ ಗುಂಜಾವತಿ ಬಳಿ ಕಾರು ಅಪಘಾತ, ಮದುವೆಗೆಂದು ಬಂದಿದ್ದ ಮಹಾರಾಷ್ಟ್ರದ ಕುಟುಂಬಕ್ಕೆ ಆಘಾತ..!


ಮುಂಡಗೋಡ ತಾಲೂಕಿನ ಯಲ್ಲಾಪುರ ರಸ್ತೆಯ ಬಡ್ಡಿಗೇರಿ, ಗುಂಜಾವತಿ ನಡುವೆ ಕಾರು ಅಪಘಾತವಾಗಿದೆ. ಮದುವೆಗೆಂದು ಬಂದಿದ್ದ ಮಹಾರಾಷ್ಟ್ರ ಮೂಲದ ಕುಟುಂಬದ ಕಾರು ನಿಯಂತ್ರಣ ತಪ್ಪಿ ಅಪಘಾತವಾಗಿದೆ. ಪರಿಣಾಮ ಕಾರಲ್ಲಿದ್ದ ಕೆಲವರಿಗೆ ಸಣ್ಣಪುಟ್ಟ ಗಾಯವಾಗಿದೆ. ಅದೃಷ್ಟವಶಾತ್ ಪ್ರಾಣಾಪಾಯವಾಗಿಲ್ಲ.

ಮಹಾರಾಷ್ಟ್ರ ಮೂಲದ ಕುಟುಂಬ ಇಂದು ಮುಂಡಗೋಡ ತಾಲೂಕಿನಲ್ಲಿ ಮದುವೆ ಇದ್ದ ಕಾರಣ, ಮದುವೆಗೆಂದು ಆಗಮಿಸಿತ್ತು. ಮದುವೆ ಮುಗಿಸಿಕೊಂಡು ಹೊರಡುವಾಗ ಬಡ್ಡಿಗೇರಿ ಸಮೀಪದ ರಸ್ತೆಯಲ್ಲಿ ನಿಯಂತ್ರಣ ತಪ್ಪಿದೆ. ಹೀಗಾಗಿ, ಕಾರು ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಅಪಘಾತದ ಭೀಕರತೆಗೆ ಸಾಕ್ಷಿಯಾಗಿದೆ. ಆದ್ರೂ ಅದೃಷ್ಟವಶಾತ್ ಕಾರಲ್ಲಿದ್ದವರಿಗೆ ಗಂಭೀರ ಗಾಯಗಳಾಗಿಲ್ಲ ಅನ್ನೋ ಮಾಹಿತಿ ಲಭ್ಯವಾಗಿದೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ‌.

error: Content is protected !!