ಬೆಂಗಳೂರು: ನೂತನವಾಗಿ ಸಚಿವ ಸಂಪುಟ ಸೇರಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಕಲಘಟಗಿ ಶಾಸಕ ಸಂತೋಷ ಲಾಡ್ ಹಾಗೂ ಸೊರಬ ಶಾಸಕ ಮಧು ಬಂಗಾರಪ್ಪ ನವರಿಗೆ ಯಲ್ಲಾಪುರ ಕ್ಷೇತ್ರದ ಮಾಜಿ ಶಾಸಕ ಕಾಂಗ್ರೆಸ್ ಮುಖಂಡ ವಿ.ಎಸ್.ಪಾಟೀಲ್ ಭೇಟಿ ಮಾಡಿ ಶುಭಕೋರಿದ್ರು.
ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಭೇಟಿ ಮಾಡಿ ಶುಭಾಶಯ ತಿಳಿಸಿದ ವಿ.ಎಸ್.ಪಾಟೀಲ್ ರಿಗೆ ಮುಖಂಡರಾದ ಕೃಷ್ಣ ಹಿರೇಹಳ್ಳಿ, ಎಚ್.ಎಂ.ನಾಯ್ಕ್ ಸೇರಿದಂತೆ ಹಲವರು ಸಾಥ್ ನೀಡಿದ್ರು.