ಮುಂಡಗೋಡ ತಾಲೂಕಿನ ಚಿಗಳ್ಳಿಯಲ್ಲಿ ಯುವಕನೊರ್ವ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಸದ್ಯ ತಾಲೂಕಾಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹುಬ್ಬಳ್ಳಿಯ ಕಿಮ್ಸ್ ಗೆ ಹೆಚ್ಚಿನ ಚಿಕಿತ್ಸೆಗಾಗಿ ರವಾನಿಸಲಾಗಿದೆ.
ಅಂದಹಾಗೆ, ಫಕ್ಕಿರಸ್ವಾಮಿ ಪಾಂಡು ರಾಣೋಜಿ ಎಂಬುವವನೇ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದವನಾಗಿದ್ದು, ಆತ್ಮಹತ್ಯೆ ಯತ್ನಕ್ಕೆ ಕಾರಣವೇನು ಅಂತಾ ತಿಳಿದು ಬಂದಿಲ್ಲ. ಸದ್ಯ ಮುಂಡಗೋಡ ಠಾಣೆ ಪೊಲೀಸರು ಭೇಟಿ ನೀಡಿ, ಮುಂದಿನ ಕ್ರಮ ಕೈಗೊಂಡಿದ್ದಾರೆ.