ಬೆಂಗಳೂರು; ಶಿವಶರಣ ಹಡಪದ ಅಪ್ಪಣ್ಣನವರ ರಾಜ್ಯಮಟ್ಟದ ಜಯಂತಿಯನ್ನು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಆಚರಿಸಲಾಯಿತು. ಸಿಎಂ ಸಿದ್ದರಾಮಯ್ಯ ಜಯಂತಿಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ್ರು.
ಶಿವಶರಣ ಹಡಪದ ಅಪ್ಪಣ್ಣ ನವರ ಭಾವಚಿತ್ರಕ್ಕೆ ಪುಷ್ಟಾರ್ಚನೆ ಮಾಡುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ಉದ್ಘಾಟಿಸಿದ್ರು.
ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ವತಿಯಿಂದ ನಡೆದ ಶಿವಶರಣ ಶ್ರೀ ಹಡಪದ ಅಪ್ಪಣ್ಣನವರ ರಾಜ್ಯ ಮಟ್ಟದ ಜಯಂತಿ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯರವರು , ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವ ಶಿವರಾಜ ತಂಗಡಗಿರವರು, ಹಡಪದ ಅಪ್ಲಣ್ಣ ದೇವರ ಸಂಸ್ಥಾನ ಮಠ ತಂಗಡಗಿಯ ಪರಮಪೂಜ್ಯ ಅನ್ನದಾನ ಭಾರತಿ ಅಪ್ಪಣ್ಣ ಮಹಾ ಸ್ವಾಮಿಗಳು , ಅಖಿಲ ಕರ್ನಾಟಕ ಹಡಪದ ಅಪ್ಪಣ್ಣ ಸಮಾಜ ಸೇವಾ ಸಂಘದ ರಾಜ್ಯಾಧ್ಯಕ್ಷರಾದ ಸಿದ್ದಪ್ಪ ಮ ಹಡಪದ ಸೇರಿದಂತೆ ರಾಜ್ಯ ಸಂಘದ ಪದಾಧಿಕಾರಿಗಳು ಬೆಂಗಳೂರು ಜಿಲ್ಲಾ ಸಂಘದ ಅಧ್ಯಕ್ಷರಾದ ನಾಗರಾಜ ಹಡಪದ ಮತ್ತು ಪದಾಧಿಕಾರಿಗಳು ಭಾಗವಹಿಸಿದ್ದರು .
ಸಮಾರಂಭದಲ್ಲಿ ಬೆಂಗಳೂರು ನಗರದ ಸಮಾಜದ ಬಂಧುಗಳು ಹಾಗೂ ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಸಮಾಜದ ಬಂಧುಗಳು ಆಗಮಿಸಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.