ಹುಬ್ಬಳ್ಳಿ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದಿಂದ ಮಹಿಳೆಯರ ಉಚಿತ ಪ್ರಯಾಣಕ್ಕಾಗಿ ಜಾರಿಗೊಳಿಸಲಾದ ಶಕ್ತಿ ಯೋಜನೆಯ ಲಾಭ ಪಡೆಯುವ ಉದ್ದೇಶದಿಂದ ಹಿಂದೂ ವ್ಯಕ್ತಿಯೊಬ್ಬ ಮುಸ್ಲಿಂ ಮಹಿಳೆಯರ ಬುರ್ಖಾ ಧರಿಸಿ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣ ಮಾಡಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.
ಇನ್ನು ರಾಜ್ಯ ಸರ್ಕಾರದಿಂದ ಜಾರಿಗೊಳಿಸಲಾದ ಶಕ್ತಿ ಯೋಜನೆ ಲಾಭ ಪಡೆಯಲು ಹಲವು ಪುರುಷರು ಇದೇ ಮಾರ್ಗವನ್ನು ಅನುಸರಿಸುತ್ತಿದ್ದಾರೆ ಎನ್ನುವ ಅನುಮಾನ ವ್ಯಕ್ತವಾಗುತ್ತಿದೆ. ಇನ್ನು ಈ ಕುರಿತು ಸಾರ್ವಜನಿಕರು ಬುರ್ಖಾ ಧರಿಸಿದ್ದರೂ ಬಸ್ ನಿಲ್ದಾಣದಲ್ಲಿ ಒಬ್ಬಂಟಿಯಾಗಿ ಕುಳಿತಿದ್ದರಿಂದ ಪ್ರಶ್ನೆ ಮಾಡಿದಾಗ ವೀರಭದ್ರಯ್ಯ ಸಿಕ್ಕಿಬಿದ್ದಿದ್ದಾನೆ. ಈ ವೇಳೆ ತಾನು ಭಿಕ್ಷಾಟನೆ ಉದ್ದೇಶದಿಂದ ಬುರ್ಖಾ ಹಾಕಿದ್ದೇನೆ ಎಂದು ವೀರಭದ್ರಯ್ಯ ಹೇಳಿಕೊಂಡಿದ್ದಾನೆ.